• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿತ್ರದುರ್ಗ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

|

ಚಿತ್ರದುರ್ಗ, ಅಕ್ಟೋಬರ್ 11 : ಚಿತ್ರದುರ್ಗ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಲು 3/11/2018 ಕೊನೆಯ ದಿನವಾಗಿದೆ.

ಶೀಘ್ರಲಿಪಿಗಾರರು 5, ಬೆರಳಚ್ಚುಗಾರರು 8 , ಬೆರಳಚ್ಚು-ನಕಲುಗಾರರು 6, ಆದೇಶ-ಜಾರಿಕಾರರು 8 ಹಾಗೂ ಜವಾನ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಈ ಅಧಿಸೂಚನೆಯ ಜೊತೆಗೆ ಲಗತ್ತಿಸಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಬೆರಳಚ್ಚು ಅಥವ ಗಣಕೀಕೃತ ಅರ್ಜಿಯನ್ನು ರಚಿಸಿಕೊಂಡು ಸಲ್ಲಿಸಬೇಕು.

16 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಇಎಲ್

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಪ್ರವರ್ಗ -1 40 ವರ್ಷಗಳು. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು.

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆಯುವುದರ ಮೂಲಕ ಅರ್ಜಿಯನ್ನು ಸಮುಚಿತ ಮಾರ್ಗದ ಮುಖಾಂತರ ಸಲ್ಲಿಸಬಹುದಾಗಿದೆ.

73 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಟಿಬಿಪಿ

ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ವಿಳಾಸ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

English summary
Chitradurga court issued recruitment notification for the post of Typist, Typist copyist, Stenographer and Peon post. November 3, 2018 last date to submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X