ಚಿತ್ರದುರ್ಗ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ
ಚಿತ್ರದುರ್ಗ, ಅಕ್ಟೋಬರ್ 11 : ಚಿತ್ರದುರ್ಗ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಲು 3/11/2018 ಕೊನೆಯ ದಿನವಾಗಿದೆ.
ಶೀಘ್ರಲಿಪಿಗಾರರು 5, ಬೆರಳಚ್ಚುಗಾರರು 8 , ಬೆರಳಚ್ಚು-ನಕಲುಗಾರರು 6, ಆದೇಶ-ಜಾರಿಕಾರರು 8 ಹಾಗೂ ಜವಾನ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಈ ಅಧಿಸೂಚನೆಯ ಜೊತೆಗೆ ಲಗತ್ತಿಸಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಬೆರಳಚ್ಚು ಅಥವ ಗಣಕೀಕೃತ ಅರ್ಜಿಯನ್ನು ರಚಿಸಿಕೊಂಡು ಸಲ್ಲಿಸಬೇಕು.
16 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಇಎಲ್
ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್ಸಿ/ಎಸ್ಟಿ/ಪ್ರವರ್ಗ -1 40 ವರ್ಷಗಳು. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು.
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ತಮ್ಮ ನೇಮಕಾತಿ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆಯುವುದರ ಮೂಲಕ ಅರ್ಜಿಯನ್ನು ಸಮುಚಿತ ಮಾರ್ಗದ ಮುಖಾಂತರ ಸಲ್ಲಿಸಬಹುದಾಗಿದೆ.
73 ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಟಿಬಿಪಿ
ಈ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಭರ್ತಿ
ಮಾಡಿದ
ಅರ್ಜಿಗಳನ್ನು
ಸಲ್ಲಿಸಲು
ವಿಳಾಸ
ಪ್ರಧಾನ
ಜಿಲ್ಲಾ
ಮತ್ತು
ಸತ್ರ
ನ್ಯಾಯಾಧೀಶರು
ಪ್ರಧಾನ
ಜಿಲ್ಲಾ
ಮತ್ತು
ಸತ್ರ
ನ್ಯಾಯಾಲಯ