Get Updates
Get notified of breaking news, exclusive insights, and must-see stories!

ಉದ್ಯೋಗ ಮಾಹಿತಿ: ಚಿತ್ರದುರ್ಗದಲ್ಲಿ ಜುಲೈ 30ರಂದು ಉದ್ಯೋಗ ಮೇಳ

ಚಿತ್ರದುರ್ಗ, ಜುಲೈ, 28 :‌ ಉದ್ಯೋಗ ಹುಡುಕಾಟ ನಡೆಸುತ್ತಿರುವವರಿಗೆ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್‌ಜೆಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಿಂದ ಜುಲೈ 30 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ.

ಜುಲೈ 30ರಂದು ಚಿತ್ರದುರ್ಗ ನಗರದ ಚಂದ್ರವಳ್ಳಿಯ ಎಸ್.ಜೆ.ಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕಾಲೇಜು ಕ್ಯಾಂಪಸ್‍ನಲ್ಲಿ ಬೆಳಗ್ಗೆ 10:30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ಆಗಮಿಸಲಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮಾಡಲಿದ್ದಾರೆ. ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಭಾಗವಹಿಸಿ ಉದ್ಯೋಗ ದೊರಕಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Chitradurga: Job fair on 30th July at Employment Exchange Center

ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿನವರಾಗಿರಬೇಕು. ಮುಖ್ಯವಾಗಿ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೊ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ, ಎಂ.ಎ, ಮತ್ತು ಇತರೆ ಪದವೀಧರರು ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು 6 ಸೆಟ್‌ ಬಯೋಡಟಾ (ರೆಸ್ಯೂಮ್ಸ್‌), ವಿದ್ಯಾಭ್ಯಾಸದ ಪ್ರಮಾಣ ಪತ್ರಗಳು, ಭಾವಚಿತ್ರಗಳು, ಆಧಾರ್ ಕಾರ್ಡ್ ಸೇರಿದಂತೆ ಕಡ್ಡಾಯವಾಗಿ ಅಗತ್ಯ ದಾಖಲೆಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ: ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Chitradurga: Job fair on 30th July at Employment Exchange Center

ಚಿತ್ರದುರ್ಗದ ಎಸ್.ಜೆ.ಎಂ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕಾಲೇಜು ಕ್ಯಾಂಪಸ್‍ನಲ್ಲಿ ಜುಲೈ 30ರಂದು ಉದ್ಯೋಗ ಮೇಳವನ್ನು ಆಯೋಜಿಲಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರತಿಷ್ಠಿತ ಕಂಪನಿಗಳು ಆಗಮಿಸಲಿವೆ. ಉದ್ಯೋಗವಕಾಶವನ್ನು ಬಯಸುವ ಆಸಕ್ತ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Recommended Video

      ಪ್ರವೀಣ್ ಹತ್ಯೆ ಬಗ್ಗೆ ಮಾತಾಡುವಾಗ ತೇಜಸ್ವಿ ಸೂರ್ಯ ಆಡಿದ ಮಾತು ಈಗ ಫುಲ್ ವೈರಲ್ | OneIndia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+