ಚಿತ್ರದುರ್ಗ, ತುಮಕೂರು; ಕೆಲಸ ಖಾಲಿ ಇದೆ, ವಿವರಗಳು
ಚಿತ್ರದುರ್ಗ, ಆಗಸ್ಟ್ 27; ತುಮಕೂರಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿತ್ರದುರ್ಗದಲ್ಲಿ ಆಗಸ್ಟ್ 30ರಂದು ನೇರ ನೇಮಕಾತಿ ಸಂದರ್ಶನ ಆಯೋಜನೆ ಮಾಡಲಾಗಿದೆ. ತುಮಕೂರು, ಚಿತ್ರದುರ್ಗದ ಉದ್ಯೋಗ ಮಾಹಿತಿ ವಿವರಗಳು ಇಲ್ಲಿವೆ.
ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ತನಕ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 30 ವರ್ಷಗಳು. ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಹಾಗೂ ಯಾವುದೇ ಪದವಿ ವಿದ್ಯಾರ್ಹತೆವುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು ಬಯೋಡಾಟಾ 5 ಪ್ರತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಫೋಟೋ, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು ಎಂದು ಸೂಚಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022459064, 8310785143 ಸಂಖ್ಯೆಗೆ ಸಂಪರ್ಕಿಸಬಹುದು.
ತುಮಕೂರು ಉದ್ಯೋಗ ಮಾಹಿತಿ; ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಎಲೆಕ್ಟ್ರಿಕಲ್ ಲ್ಯಾಬ್ ಕುರಿತು ಬೋಧನೆ ಮಾಡಲು ಹಾಗೂ ಯಂತ್ರೋಪಕರಣಗಳ ಎಲೆಕ್ಟ್ರಿಕಲ್ ಸಂಬಂಧಿಸಿದ ನಿರ್ವಹಣೆ ಮಾಡಲು ಪೂರ್ಣ ಅವಧಿಯ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.
ಐಟಿಐ ಎಲೆಕ್ಟ್ರಿಕಲ್‌ನಲ್ಲಿ ಉತ್ತೀರ್ಣರಾದ ಮತ್ತು ಕನಿಷ್ಟ 2 ವರ್ಷಗಳ ಕೈಗಾರಿಕಾ ಅಥವಾ ಬೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆ ಪ್ರಮಾಣ ಪತ್ರದೊಂದಿಗೆ ಆಗಸ್ಟ್ 28ರ ತನಕ ಅರ್ಜಿ ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9916769649 ಅನ್ನು ಸಂಪರ್ಕಿಸಬಹುದಾಗಿದೆ.
ಸಹಾಯಧನಕ್ಕೆ ಅರ್ಜಿ ಹಾಕಿ; ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ.
ಮೀನು ಕೃಷಿಕೊಳಗಳ ನಿರ್ಮಾಣ ಮಾಡಿಕೊಂಡು ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ ನೀಡಲಾಗುತ್ತದೆ. ಮೀನು ಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯಧನವಿದೆ. ಮೀನು ಮಾರಾಟಕ್ಕಾಗಿ ರೆಫ್ರಿಜರೇಟೆಡ್ ವಾಹನ ಖರೀದಿಗೆ ಸಹಾಯಧನ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತದೆ.
ಆಸಕ್ತರು ಸೆಪ್ಟೆಂಬರ್ 10ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ.












Click it and Unblock the Notifications