ಮೈಸೂರಿನ ಸಿಐಐಎಲ್ ನಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು, ಮಾರ್ಚ್ 15: ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥೆ(CIIL)ಯಲ್ಲಿ ವಿವಿಧ ಹುದ್ದೆಗಳಿದ್ದು, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳ ನೇಮಕಾತಿ ನಡೆದಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 15 ರಿಂದ ಏಪ್ರಿಲ್ 22, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Central Institute of Indian Languages (CIIL)

ಹುದ್ದೆ ಹೆಸರು: ಮುಖ್ಯ ಸಂಪನ್ಮೂಲ ವ್ಯಕ್ತಿ(Chief resource person), ಹಿರಿಯ ಸಂಪನ್ಮೂಲ ವ್ಯಕ್ತಿ, ಕಿರಿಯ ಸಂಪನ್ಮೂಲ ವ್ಯಕ್ತಿ

ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ : ಮೈಸೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 22, 2019

CIIL Recruitment 2019 apply for Various Resource Person Post

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ ಅಥವಾ ತತ್ಸಮಾನ ವಿದ್ಯಾಭ್ಯಾಸ.

ವಯೋಮಿತಿ : 58 ವರ್ಷ

ಸಂಬಳ ನಿರೀಕ್ಷೆ:
ಮುಖ್ಯ ಸಂಪನ್ಮೂಲ ವ್ಯಕ್ತಿ : 43, 636 ರು
ಹಿರಿಯ ಸಂಪನ್ಮೂಲ ವ್ಯಕ್ತಿ: 42,000ರು
ಕಿರಿಯ ಸಂಪನ್ಮೂಲ ವ್ಯಕ್ತಿ : 34,280 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಹುಟ್ಟಿದ ದಿನಾಂಕ, ಜಾತಿ ಪ್ರಮಾಣ ಪತ್ರ, ಶೈಕ್ಷಣಿಕ ಆರ್ಹತೆ ಸೇರಿದಂತೆ ಅಗತ್ಯ ದಾಖಲೆಗಳ ಫೋಟೋಕಾಪಿ ಜತೆಗೆ ಅಭ್ಯರ್ಥಿಯ ಸ್ವಯಂ ಹಸ್ತಾಕ್ಷರವುಳ್ಳ ತುಂಬಿದ ಅರ್ಜಿಯನ್ನು ಈ ಕೆಳಕಂಡ ವಿಳಾಸ ಕಳಿಸತಕ್ಕದ್ದು.

ವಿಳಾಸ:
ಸಹಾಯಕ ನಿರ್ದೇಶಕರು(ಆಡಳಿತ)
ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥೆ(CIIL)
ಮಾನಸ ಗಂಗೋತ್ರಿ
ಮೈಸೂರು -570 006
ಕರ್ನಾಟಕ

ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+