CISF Constable Recruitment 2025: ಮಾಸಿಕ ₹69,100 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ
CISF Constable Recruitment 2025: ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಖಾಲಿಯಿರುವ 1,161 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇದೀಗ ಸಿಐಎಸ್ಎಫ್ ಖಾಲಿರುವ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಸಂಬಂಧ ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 05, 2025ರಿಂದ ಆರಂಭವಾಗಲಿದ್ದು, ಏಪ್ರಿಲ್ 3 ಕೊನೆ ದಿನ ಆಗಿದೆ.

ಭಾರತದಲ್ಲಿ ಯಾವುದೇ ಭಾಗದಲ್ಲಿದ್ದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಾದರೂ ಕರ್ತವ್ಯಕ್ಕೆ ಸಿದ್ಧರಿರಬೇಕು. ಕೇಂದ್ರ ಸರ್ಕಾರದ ಭದ್ರತಾ ಸಂಸ್ಥೆಯಡಿ ಉದ್ಯೋಗ ಮಾಡಲು ಇಚ್ಛಿಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಮೊದಲೇ ಸಿದ್ಧಪಡಿಸಿಕೊಳ್ಳುವುದು ಉತ್ತಮ.
ಅರ್ಜಿ ಸಲ್ಲಿಸಬಯಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700ದಿಂದ 69,100 ರೂಪಾಯಿ ಸಂಬಳ ಇರಲಿದೆ. 18 ರಿಂದ 28 ವರ್ಷದದೊಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಶುಲ್ಕದ ವಿಚಾರಕ್ಕೆ ಬಂದರೆ, ಸಾಮಾನ್ಯ, ಒಬಿಸಿ, ಇಡಬ್ಲುಎಸ್ ಅಭ್ಯರ್ಥಿಗಳು 100 ರೂಪಾಯಿ ಪಾವತಿಸಬೇಕು. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇದೆ.
ಅರ್ಜಿ ಸಲ್ಲಿಕೆಗಾಗಿ https://cisfrectt.cisf.gov.in/ ಗೆ ಭೇಟಿ ನೀಡಬಹುದು. ಸಂಪೂರ್ಣ ಮಾಹಿತಿಗಾಗಿ https://cisfrectt.cisf.gov.in/file_open.php?fnm=TJWLVRED20N4P74hbL7QaiBsCnCwcEc8XCekOQExUIYgM4vRHuslt1ebinD861IH0ZD80miud66l43IvnNTzRRE3kFo7Spz5lg2ZQO8c-Xc ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಭಾರತೀಯ ರೈಲ್ವೆಯು ಖಾಲಿಯಿರುವ 32,438 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 23ರಿಂದ ಆರಂಭಿಸಲಾಗಿದ್ದು, ಫೆಬ್ರವರಿ 22ಕ್ಕೆ ಕೊನೆಗೊಂಡಿತ್ತು. ಆದರೆ, ಇದೀಗ ಈ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಹಾಗಾದರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 1, 2025ರ ವರೆಗೆ ಅವಕಾಶ ಕಲ್ಪಿಸಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ರೈಲ್ವೆ ಇಲಾಖೆ ಬರುವುದರಿಂದ ದೇಶದ ಯಾವುದೇ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡಲು ಅಭ್ಯರ್ಥಿಗಳು ಸಿದ್ಧರಾಗಿರಬೇಕು. ಹಲವು ವರ್ಷಗಳಿಂದ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ರೈಲ್ವೆ ಇಲಾಖೆಯ ಗ್ರೂಪ್- ಡಿ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,000 ರೂಪಾಯಿಯಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸಬಯಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕಾಗುತ್ತದೆ. ಅರ್ಜಿ ಸಲ್ಲಿಕೆ ಶುಲ್ಕದ ವಿಚಾರಕ್ಕೆ ಬಂದರೆ, ಎಸ್ಸಿ, ಎಸ್ಟಿ, ಮಹಿಳೆ, ವಿಶೇಷ ಚೇತನ- 250 ರೂಪಾಯಿ, ಜನರಲ್, ಇಡಬ್ಲುಎಸ್, ಒಬಿಸಿ ವರ್ಗದವರು 500 ರೂಪಾಯಿ ಪಾವತಿಸಬೇಕಾಗುತ್ತದೆ.
ಬೇಕಾದ ಪ್ರಮುಖ ದಾಖಲೆಗಳು: ಅರ್ಜಿ ಸಲ್ಲಿಸಬಯಸುವವರು ಯಾವುದಾದರೂ ಗುರುತಿನ ಚೀಟಿ, ಶೈಕ್ಷಣಿಕ ಪ್ರಮಾಣಪತ್ರಗಳು, ಜಾತಿ ಪ್ರಮಾಣ ಪತ್ರ ಅಂಗವೈಕಲ್ಯ ಪ್ರಮಾಣಪತ್ರ (ವಿಶೇಷ ಚೇತನರು ಆಗಿದ್ದರೆ), ಪಾಸ್‌ಪೋಟೋಗಳು, ಸಹಿಯ ದಾಖಲೆಗಳನ್ನು ತರಬೇಕಾಗುತ್ತದೆ. ಈ ಹುದ್ದೆಗಳಿಗೆ 18 ವರ್ಷದಿಂದ 33 ವರ್ಷದವರೆಗಿನವರು ಅರ್ಜಿ ಸಲ್ಲಿಕೆ ಮಾಡಬಹುದು.












Click it and Unblock the Notifications