ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 690 ಹುದ್ದೆಗಳಿವೆ
ನವದೆಹಲಿ, ಜನವರಿ 04: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 690 ಹೆಡ್ ಕಾನ್ಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಫೆಬ್ರವರಿ 05ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು: 690
ಹುದ್ದೆ ಹೆಸರು: Assistant Sub Inspector (Executive)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 05, 2021
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆಯಬಹುದು.

ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಮೆಡಿಕಲ್ ಪರೀಕ್ಷೆ, ವೃತ್ತಿ ಪರೀಕ್ಷೆ ಸೇರಿದಂತೆ ಇನ್ನಿತರ ಪರೀಕ್ಷೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 31-12-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-02-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications