ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ: ಪಿಯುಸಿ ಪಾಸಾದವರು ಅರ್ಜಿ ಹಾಕಿ
ನವದೆಹಲಿ, ಫೆಬ್ರವರಿ 11: ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್/ ಫೈರ್‌ಮೆನ್‌ಗಳ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.
ಸಿಐಎಸ್‌ಎಫ್ ಹುದ್ದೆಗಳಿಗೆ ಪುರುಷರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಅದರಂತೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ - cisfrectt.in ಮೂಲಕ ಅರ್ಜಿ ಸಲ್ಲಿಸಬಹುದು. CISF Recruitment 2022 ನೇಮಕಾತಿಯ ಕುರಿತ ಇತರೆ ವಿವರಗಳು ಈ ಕೆಳಗಿನಂತಿವೆ.
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ- 1149 ಹುದ್ದೆಗಳು
UR- 489 ಹುದ್ದೆಗಳು
ಆರ್ಥಿಕವಾಗಿ ದುರ್ಬಲ ವಿಭಾಗ- 113 ಹುದ್ದೆಗಳು
ಎಸ್ಸಿ-161 ಹುದ್ದೆಗಳು
ಎಸ್‌ಟಿ- 137 ಹುದ್ದೆಗಳು
ಇತರೆ ಹಿಂದುಳಿದ ವರ್ಗ- 249 ಹುದ್ದೆಗಳು

ಅರ್ಹತಾ ಮಾನದಂಡಗಳು
ಸಿಐಎಸ್‌ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸೈನ್ಸ್ ಸ್ಟ್ರೀಮ್‌ನಿಂದ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷಗಳ ಒಳಗಿರಬೇಕು. ಅಭ್ಯರ್ಥಿಗಳು ಮಾರ್ಚ್ 05, 1999ಕ್ಕಿಂತ ಮೊದಲು ಮತ್ತು ಮಾರ್ಚ್ 04, 2004ಕ್ಕಿಂತ ನಂತರ ಹುಟ್ಟಿರಬಾರದು. ಇನ್ನು ಎಸ್‌ಸಿ/ಎಸ್‌ಟಿ ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಹುದ್ದೆಗಳ ವೇತನ ವಿವರ
ಸಿಐಎಸ್‌ಎಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರವರೆಗೆ ಮಾಸಿಕ ವೇತನ ಸಿಗಲಿದೆ.
ಅರ್ಜಿ ಶುಲ್ಕ
ಸಿಐಎಸ್‌ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕರು (ESM) ಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
ಸಿಐಎಸ್‌ಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟದ ಪರೀಕ್ಷೆ (ಪಿಎಸ್‌ಟಿ) ಮತ್ತು ದಾಖಲೆ ಪರಿಶೀಲನೆ (ಡಿವಿ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
CISF ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗಳ ಪ್ರಕಾರ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ cisfrectt.in ನಲ್ಲಿ ಮಾರ್ಚ್ 4ರ ಒಳಗೆ ಅರ್ಜಿ ಸಲ್ಲಿಸಬೇಕು.












Click it and Unblock the Notifications