ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 249 ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 22: ಭಾರತದಾದ್ಯಂತ ಖಾಲಿ ಇರುವ 249 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ವೆಬ್ ತಾಣದಲ್ಲಿ ನೀಡಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Central Industrial Security Force(CISF)
ಒಟ್ಟು ಹುದ್ದೆಗಳು: 249
ಹುದ್ದೆ ಹೆಸರು: ಹೆಡ್ ಕಾನ್ಸ್ ಟೇಬಲ್ (GD)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 31, 2022
ಸಂಬಳ ನಿರೀಕ್ಷೆ: 25,500 ರು ನಿಂದ 81,100 ರು

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು. 12ನೇ ತರಗತಿ ಪಾಸಾಗಿರಬೇಕು ಹಾಗೂ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯ ಪ್ರಮಾಣ ಪತ್ರ ಹೊಂದಿರತಕ್ಕದ್ದು. ರಾಜ್ಯ, ದೇಶವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಸೂಕ್ತ ದಾಖಲೆ ಹೊಂದಿರಬೇಕು.
ವಯೋಮಿತಿ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರು
ಮಹಿಳೆ/ ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಆಯ್ಕೆ ವಿಧಾನ: ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13/02/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :31/03/2022
ಅರ್ಜಿ ಸಲ್ಲಿಸುವ ವಿಧಾನ
* ಮೊದಲಿಗೆ, ಅಧಿಕೃತ ವೆಬ್‌ಸೈಟ್ cisf.gov.in ಗೆ ಭೇಟಿ ನೀಡಿ
* CISF ಹೆಡ್ ಕಾನ್ಸ್‌ಟೇಬಲ್ ಉದ್ಯೋಗಗಳ ಅಧಿಸೂಚನೆ 2021-2022 ಅನ್ನು ಡೌನ್‌ಲೋಡ್ ಮಾಡಿ ಮತ್ತು ಪರಿಶೀಲಿಸಿ.
* ಅರ್ಜಿ ನಮೂನೆಯನ್ನು ಪಡೆಯಿರಿ ಮತ್ತು ಅಗತ್ಯವಿರುವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಯನ್ನು ಪೂರ್ಣಗೊಳಿಸಿ.
* ಅಂತಿಮವಾಗಿ, ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಅಂಚೆ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (https://www.cisf.gov.in)












Click it and Unblock the Notifications