CISF Recruitment 2023:ಖಾಲಿ 706 ASI ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ತಿಳಿಯಿರಿ
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನಲ್ಲಿ ನೌಕರಿ ಹೊಂದುವ ಬಯಕೆ ಇರುವವಿಗೆ ಇಲ್ಲಿದೆ ಸುವರ್ಣ ಅವಕಾಶ. ಒಟ್ಟು 706 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ
ಬೆಂಗಳೂರು, ಜನವರಿ 24: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನಲ್ಲಿ ನೌಕರಿ ಹೊಂದುವ ಬಯಕೆ ಇರುವವಿಗೆ ಇಲ್ಲಿದೆ ಸುವರ್ಣ ಅವಕಾಶ. ಕರೆಯಲಾಗಿರುವ ಒಟ್ಟು 706 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(CISF) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 706 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆ ನೇಮಕ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತರು ಮುಂದಿನ ತಿಂಗಳ ಫೆಬ್ರವರಿ 12ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ವಿಧಾನ, ಆಯ್ಕೆ ಪ್ರಕ್ರಿಯೆ, ಶುಲ್ಕ ಕುರಿತಾಗಿ ಈ ವರದಿಯಲ್ಲಿ ತಿಳಿದುಕೊಳ್ಳಬಹುದು.

ಹುದ್ದೆಗಳ ವಿವರ
ಸಂಸ್ಥೆ ಹೆಸರು- ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್
ಹುದ್ದೆ ಹೆಸರು- ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್
ಖಾಲಿ ಹುದ್ದೆಗಳು- 706
ವಿದ್ಯಾರ್ಹತೆ - ಪದವಿ
ಉದ್ಯೋಗದ ಸ್ಥಳ- ಭಾರತ
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರುವುದು ಕಡ್ಡಾಯಗೊಳಿಸಲಾಗಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ಕಳೆದ ವರ್ಷ 2022ರ ಆಗಸ್ಟ್ 1ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಈ ಪೈಕಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ನಿಯಮದಲ್ಲಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗಿದೆ?
ಸೇವೆಯ ಆಧಾರದಡಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ದೈಹಿಕ ಗುಣಮಟ್ಟದ ಪರೀಕ್ಷೆ (PST) ನಡೆಸಲಾಗುವುದು. ಬಳಿಕ ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ವೈದ್ಯಕೀಯ ಪರೀಕ್ಷೆ ಸಂದರ್ಶನದಲ್ಲಿ ಅಭ್ಯರ್ಥಿ ಉತ್ತೀರ್ಣ ಆಗಬೇಕು.












Click it and Unblock the Notifications