ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ

ಬೆಂಗಳೂರು, ಮೇ 24; ಕರ್ನಾಟಕ ರಾಜ್ಯ ಪೊಲೀಸ್ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 25/6/2021 ಅಂತಿಮ ದಿನಾಂಕವಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು 168cm ಎತ್ತರ ಇರಬೇಕು. ಆಯ್ಕೆಯಾದವರಿಗೆ ವೇತನ ಶ್ರೇಣಿ ರೂ. 23500-47650.

ಮಂಗಳೂರು ನಗರದಲ್ಲಿ 135 ಹುದ್ದೆಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 68 ಹುದ್ದೆಗಳು. ಉಡುಪಿ ಜಿಲ್ಲೆಯಲ್ಲಿ 81 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Civil Police Constable Recruitment 2021 Apply Till June 25

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಟ 19 ವರ್ಷ. ಗರಿಷ್ಟ ವಯೋಮತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷಗಳು. ಎಸ್‌ಸಿ/ ಎಸ್‌ಟಿ/ ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷಗಳು.

ಅರ್ಜಿಗಳನ್ನು 25/5/2021 ರಿಂದ 25/6/2021ರ ತನಕ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸಮೀಪದ ಅಂಚೆ ಕಚೇರಿಯಲ್ಲಿ ಪಾವತಿಸಬಹುದು.

ಅರ್ಜಿ ಸಲ್ಲಿಸುವಾಗ ಬೇಕಾಗುವ ದಾಖಲೆಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಗ್ರಾಮೀಣ ವಿಧ್ಯಾಭ್ಯಾಸ ಪ್ರಮಾಣ ಪತ್ರ, 4 ಪಾಸ್‌ಪೋರ್ಟ್ ಸೈಜ್ ಫೋಟೋ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+