ದಾವಣಗೆರೆಯಲ್ಲಿ 25 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 09 : ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿ., ಚನ್ನಗಿರಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 10/9/2018 ಕೊನೆಯ ದಿನವಾಗಿದೆ.

ಆಂತರಿಕ ಲೆಕ್ಕಪರಿಶೋಧಕರು 3, ದ್ವಿತೀಯ ದರ್ಜೆ ಸಹಾಯಕರು 20, ಸಿವಿಲ್ ಇಂಜಿನಿಯರ್ 1, ಸೆಕ್ಯುರಿಟಿ ಮ್ಯಾನೇಜರ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಸಂಘಕ್ಕೆ ಖುದ್ದಾಗಿ/ಅಂಚೆ/ಕೋರಿಯರ್ ಮೂಲಕ ಕಳುಹಿಸಲು ಅವಕಾಶವಿರುತ್ತದೆ. ಅರ್ಜಿಗಳನ್ನು 10/9/2018 ರ ಸಂಜೆ 5 ಗಂಟೆಯವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

Co-operative Society jobs in Davanagere : Apply for 25 posts

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ ಗರಿಷ್ಟ 35, ಇತರೆ ಹಿಂದುಳಿದ ವರ್ಗ 38, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 40 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ

* ಆಂತರಿಕ ಲೆಕ್ಕ ಪರಿಶೋಧಕರು 37900-950-39800-1100-46400-1250-53900-1450-62600-1650-70850.
* ದ್ವಿತೀಯ ದರ್ಜೆ ಸಹಾಯಕರು ರೂ. 23500-550-24600-600-27000-650-29600-750-32600-850-3600 -950-39800-1100-46400-1250-47650

* ಸಿವಿಲ್ ಇಂಜಿನಿಯರ್ 25800-600-27000-650-29600-750-32600-850-36000-950-39800-1100-46400-1250-51400.

* ಸೆಕ್ಯುರಿಟಿ ಮ್ಯಾನೇಜರ್ 23500-550-24600-600-27000-650-29600-750-32600-850-36000-950-39800-1100-46400-1250-47650

ಅರ್ಜಿ ಶುಲ್ಕದ ವಿವರ : ಸಾಮಾನ್ಯ / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 2000 ರೂ. ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿ ಡೌನ್‌ಲೋಡ್, ವಿದ್ಯಾರ್ಹತೆ ಮತ್ತು ಉಳಿದ ವಿವರಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+