ಕಾಲೇಜು ಶಿಕ್ಷಣ ಇಲಾಖೆ, ವಿವಿಧ ನೌಕರರ ಸೇವಾ ಅವಧಿ ವಿಸ್ತರಣೆ

ಬೆಂಗಳೂರು, ಜನವರಿ 17; ಕಾಲೇಜು ಶಿಕ್ಷಣ ಇಲಾಖೆ ವಿವಿಧ ನೌಕರರ ಸೇವಾ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಅವಧಿ ಸಹ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು.

ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಾಟಾ ಎಂಟ್ರಿ ಆಪರೇಟರ್‌ಗಳು ಮತ್ತು ಗ್ರೂಪ್-ಡಿ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸುವ ಬಗ್ಗೆ ಆದೇಶದಲ್ಲಿ ತಿಳಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ, ಪ್ರಾದೇಶಿಕ ಕಚೇರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಣೆ ಮಾಡುವವರ ಸೇವೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

College Education Dept Of Karnataka Extended Various Post Service

ಆದೇಶದಲ್ಲಿ ಏನಿದೆ?; ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ, ಪ್ರಾದೇಶಿಕ ಕಚೇರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 102 ಡಾಟಾ ಎಂಟ್ರಿ ಆಪರೇಟರ್ ಮತ್ತು 347 ಗ್ರೂಪ್-ಡಿ ಸಿಬ್ಬಂದಿಗಳ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಒದಗಿಸಲು ಉಲ್ಲೇಖಿತ ಈ ಕಚೇರಿಯ ಆದೇಶದಲ್ಲಿ ಕಾರ್ಯಾದೇಶ ನೀಡಲಾಗಿದೆ.

ಅದರಂತೆ ಉಲ್ಲೇಖಿತ ಕಾರ್ಯಾದೇಶದ ಅವಧಿಯು ದಿನಾಂಕ 20/12/2022ಕ್ಕೆ ಅಂತ್ಯವಾಗಿದ್ದು, ಸದರಿ ಕಾರ್ಯಾದೇಶದ ಅವಧಿಯನ್ನು ಫೆಬ್ರವರಿ 2023ರ ಅಂತ್ಯದವರೆಗೆ ಮುಂದುವರೆಸಲಾಗಿದೆ.

ಅತಿಥಿ ಉಪನ್ಯಾಸಕರ ಹುದ್ದೆ; ಕಾಲೇಜು ಶಿಕ್ಷಣ ಇಲಾಖೆ 2021-22ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

2021-22ನೇ ಸಾಲಿನಲ್ಲಿ ಆಯ್ಕೆಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 31 ಜನವರಿ 2023ರ ತನಕ ವಿಸ್ತರಣೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

ಈ ಹಿನ್ನಲೆಯಲ್ಲಿ ಈ ಕಚೇರಿಯ ಸಮ ಸಂಖ್ಯೆ ಸುತ್ತೋಲೆ 28/1/2022ರ ಅನ್ವಯ ವಿವಿಧ ದಿನಾಂಕಗಳಂದು ಆನ್‌ಲೈನ್ ಕೌನ್ಸಿಲಿಂಗ್, ಮೂಲಕ ಆಯ್ಕೆಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಸೇವಾ ಅವಧಿಯನ್ನು 31, ಜನವರಿ 2023ರ ತನಕ ವಿಸ್ತರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+