ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ; ಅರ್ಜಿ ಹಾಕಲು ಸಿದ್ಧರಾಗಿ

ಬೆಂಗಳೂರು, ಡಿಸೆಂಬರ್ 02 : ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟವಾಗಲಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ನಡೆಸುವ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಿದೆ.

ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ವಾಣಿಜ್ಯ ತೆರಿಗೆಗಳ ಇಲಾಖೆಯ ಆಯುಕ್ತರಿಗೆ ಈ ಕುರಿತು ಪತ್ರ ಬರೆದು ಮಾಹಿತಿ ನೀಡಿದ್ದಾರೆ. 7/3/2019ರಲ್ಲಿ ಇಲಾಖೆ ಬರೆದಿದ್ದ ಪತ್ರಕ್ಕೆ ಅನುಮೋದನೆ ನೀಡಲಾಗಿದೆ.

ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆಗಳ ಪರಿವೀಕ್ಷಕರು ಹಾಗೂ ಶೀಘ್ರಲಿಪಿಗಾರರ ವೃಂದದಲ್ಲಿರುವ ನೇರ ನೇಮಕಾತಿ ಕೋಟಾದಡಿಯಲ್ಲಿ ಲಭ್ಯವಿರುವ ರಿಕ್ತ ಸ್ಥಾನಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.

Commercial Taxes Department Recruitment Notification Soon

ವಾಣಿಜ್ಯ ತೆರಿಗೆ ಪರಿವೀಕ್ಷಕರ 230 ಹುದ್ದೆಗಳು, ಶೀಘ್ರಲಿಪಿಗಾರರ 100 ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತ ಅಧಿಸೂಚನೆ ಶೀಘ್ರದಲ್ಲಿಯೇ ಪ್ರಕಟವಾಗಲಿದೆ.

ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಸಿಕ್ಕಿದೆ. ಕೆಪಿಎಸ್‌ಸಿ ನೇಮಕಾತಿ ಅಧಿಸೂಚನೆ ಹೊರಡಿಸಲಿದ್ದು, ಅರ್ಜಿ ಸಲ್ಲಿಸುವ ದಿನಾಂಕ, ವಯೋಮತಿ, ವಿದ್ಯಾಭ್ಯಾಸ ಮುಂತಾದ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+