ಸಿಆರ್ ಪಿಎಫ್ ನಲ್ಲಿ 219 ಹುದ್ದೆಗಳಿವೆ, ಅರ್ಜಿ ಹಾಕಲು ಏ.25 ಕೊನೆ ದಿನ
ಬೆಂಗಳೂರು, ಮಾರ್ಚ್. 09 : ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 219 ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್(ಸ್ಟೆನೋ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಏಪ್ರಿಲ್ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್(ಸ್ಟೆನೋ)
ಸ್ಥಳ: ಭಾರತದಾದ್ಯಂತ
ವೇತನ: 5200 ರಿಂದ 20200 (ತಿಂಗಳಿಗೆ)
ವಯೋಮಿತಿ: 18 ರಿಂದ 25 ವರ್ಷ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಮೂಲ ದಾಖಲಾತಿ ಪ್ರಮಾಣ ಪತ್ರಗಳ ಪರಿಶೀಲನೆ ಮಾಡುವ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.[ಅಬಕಾರಿ ಇಲಾಖೆಯಲ್ಲಿ 1180 ಹುದ್ದೆ, ಅರ್ಜಿ ಸಲ್ಲಿಕೆಗೆ ಮಾರ್ಚ್ 30 ಕೊನೆ ದಿನ]
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 100 ರು ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಹತೆ: ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಟೈಪಿಂಗ್ ಟೆಸ್ಟ್ ಪಾಸಾಗಿರಬೇಕು.
ಇನ್ನು ಹೆಚ್ಚಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications