359 ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಸಿಆರ್ಪಿಎಫ್
ಬೆಂಗಳೂರು, ಡಿಸೆಂಬರ್ 18 : ಸಿಆರ್ಪಿಎಫ್ 359 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 13/1/2019 ಕೊನೆಯ ದಿನವಾಗಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಎಆರ್ಪಿಎಫ್) 359 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಭಾರತೀಯ ನೌಕಾಪಡೆ ಯಲ್ಲಿ 500ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾನಿಲಯಗಳಿಂದ ಪಡೆದಿರಬೇಕು.
ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೆಟ್ರಿಕ್ಯುಲೇಷನ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಪಡೆದಿರಬೇಕು.
25 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಸಿಎಫ್ಟಿಆರ್ಐ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (13 ಜನವರಿ 2019ಕ್ಕೆ ಅನ್ವಯವಾಗುವಂತೆ).
ವೇತನ ಶ್ರೇಣಿ : ಹೆಡ್ ಕಾನ್ಸ್ಟೇಬಲ್ ಹುದ್ದೆಗೆ 25500-81100 ಪ್ರತಿ ತಿಂಗಳ ವೇತನ, ಕಾನ್ಸ್ಟೇಬಲ್ ಹುದ್ದೆಗೆ 21700-69100 ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಎಸ್ಸಿ/ಎಸ್ಟಿ/ಮಹಿಳಾ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಇತರ ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿಸಬೇಕು.
ಉಡುಪಿ : 12 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ,ಟ್ರಯಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ