ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 2,439 ಹುದ್ದೆಗಳಿವೆ
ನವದೆಹಲಿ, ಆಗಸ್ಟ್ 26: ಕೇಂದ್ರ ಮೀಸಲು ಪೊಲೀಸ್ ಪಡೆ(CRPF)ಯಿಂದ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಎಆರ್, ಬಿಎಸ್‌ಎಫ್, ಸಿಆರ್‌ಪಿಎಫ್, ಎಸ್‌ಎಸ್‌ಬಿ, ಐಟಿಬಿಪಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾಹಿತಿ ಪಡೆದು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂಸ್ಥೆ ಹೆಸರು: CRPF, AR, ITBP, SSB, BSF
ಹುದ್ದೆ ಹೆಸರು: ಜನರಲ್ ಡ್ಯೂಟಿ ಕಾನ್ಸ್‌ಟೇಬಲ್
ಒಟ್ಟು ಹುದ್ದೆ: 2,439
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 22, 2021.
AR: 156 ಹುದ್ದೆ
BSF: 365 ಹುದ್ದೆ
CRPF: 1537 ಹುದ್ದೆ
ITBP: 130 ಹುದ್ದೆ
SSB: 251 ಹುದ್ದೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್.
ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.

ದೈಹಿಕ ಗುಣಮಟ್ಟ ಮಿತಿ: ಎತ್ತರ: ಪುರುಷ: 180 ಸೆಂ.ಮೀ ಮಹಿಳೆ: 157 ಸೆಂ.ಮೀ ಎದೆ ಸುತ್ತಳತೆ: ಪುರುಷ: 80 ಸೆಂ.ಮೀ (ಸಾಮಾನ್ಯ ಸ್ಥಿತಿಯಲ್ಲಿ) ಕನಿಷ್ಠ ವಿಸ್ತರಣೆ: 5 ಸೆಂ.ಮೀ
ತೂಕ: ವೈದ್ಯಕೀಯ ನಿಯಮಾನುಸಾರ ಎತ್ತರಕ್ಕೆ ತಕ್ಕ ತೂಕ ಇರಬೇಕಾಗುತ್ತದೆ. ನೇಮಕಾತಿ ಪ್ರಕ್ರಿಯೆ: ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ. ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 09-08-2021
ಸಂದರ್ಶನ ದಿನಾಂಕ: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 15,2021.
ಅರ್ಜಿ ಸಲ್ಲಿಸುವುದು ಹೇಗೆ?:
* ಸಿಆರ್‌ಪಿಎಫ್ ಮುಂತಾದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://crpf.gov.in/rec/recruitment.htm)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್‌ಎಫ್‌ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications