ಹಾಸನ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ವಯೋಮಿತಿ, ಇತರ ವಿವರಗಳು
ದಾವಣಗೆರೆ, ಅಕ್ಟೋಬರ್ 13: ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಎರಡು ಜಿಲ್ಲೆಗಳ ವಿವಿಧ ಹುದ್ದೆಗಳ ನೇಮಕಾತಿಗಳು ನಡೆಯುತ್ತಿವೆ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ, ಕೆಎಸ್ಆರ್‌ಟಿಸಿ ಶಿಶಿಕ್ಷು ತರಬೇತಿ, ಖಾಸಗಿ ಕಂಪನಿಗಳ ನೇರ ಸಂದರ್ಶನದ ಮಾಹಿತಿ, ವಿವರಗಳು ಇಲ್ಲಿವೆ. ಆಸಕ್ತರು ಈ ಉದ್ಯೋಗದ ಸದುಪಯೋಗ ಪಡೆದುಕೊಳ್ಳಬಹುದು.
ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಈಗ ಅದನ್ನು ರದ್ದುಗೊಳಿಸಲಾಗಿದೆ. ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದನ್ನು ರದ್ದುಪಡಿಸಲಾಗಿದೆ, ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.

ತರಬೇತಿಗೆ ಅರ್ಜಿ ಆಹ್ವಾನ: ದಾವಣಗೆರೆ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಫಿ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದು. ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಸಲ್ಲಿಸುವವರು ಎಸ್ಎಸ್‌ಎಲ್‌ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
ಆಸಕ್ತರು ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಬಹುದು.
ಹಾಸನದಲ್ಲಿ ನೇರ ಸಂದರ್ಶನ: ಅಕ್ಟೋಬರ್ 14ರಂದು ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಿರುದ್ಯೋಗ ಯುವಕ/ಯುವತಿಯರಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ/ ಐಟಿಐ/ ಪಿಯುಸಿ/ ಡಿಪ್ಲೋಮಾ/ ಪದವಿ ತೇರ್ಗಡೆ ಹೊಂದಿದ ವಯೋಮಿತಿ 18-30 ವರ್ಷದೊಳಗಿನ ಆಸಕ್ತಿಯುಳ್ಳ ಪುರುಷ/ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ತರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಸಂಪರ್ಕಿಸಿ. ದೂರವಾಣಿ ಸಂಖ್ಯೆ 08172-296374, 9449692691, 9743144950 ಹಾಗೂ 8722606874.
ಕೆಎಸ್ಆರ್‌ಟಿಸಿ ಅಪ್ರೆಂಟಿಸ್ ತರಬೇತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪ್ರಾದೇಶಿಕ ಕಾರ್ಯಗಾರ ಹಾಸನ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯೊಂದಿಗೆ ಐಟಿಐ ವಿಭಾಗದಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಸೀಟ್ ಮೆಟಲ್‌ವರ್ಕ್ ಮತ್ತು ಪಾಸಾ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷಗಳು. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ.
ತರಬೇತಿ ಪಡೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಕ.ರಾ.ರ.ಸಾ.ನಿ, ಪ್ರಾದೇಶಿಕ ಕಾರ್ಯಗಾರ ಹಾಸನ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ಕ.ರಾ.ರ.ಸಾ.ನಿ, ಪ್ರಾದೇಶಿಕ ಕಾರ್ಯಗಾರ ಹಾಸನ ಇಲ್ಲಿ ಆಯ್ಕೆ ಸಮಿತಿ ಮುಂದೆ ಸಂದರ್ಶನಕ್ಕೆ ಹಾಜರಾಗಬೇಕು.
ನಿಗದಿತ ಅರ್ಜಿ ನಮೂನೆಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಪ.ಜಾತಿ/ ಪ.ಪಂಗಡ/ಓಬಿಸಿ/ ಅಂಗವಿಕಲ ಸರ್ಟಿಫೀಕೆಟ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಪಾಸ್ ಪೋರ್ಟ್ ಅಳತೆಯಭಾವಚಿತ್ರಗಳೊಂದಿಗೆ ಮೂಲ ದಾಖಲೆಗಳು ಮತ್ತು ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ 08172-296374.












Click it and Unblock the Notifications