ದಕ್ಷಿಣ ಕನ್ನಡದಲ್ಲಿ ಕೆಲಸ ಖಾಲಿ ಇದೆ; ಡಿ. 5ರ ತನಕ ಅರ್ಜಿ ಹಾಕಿ
ಮಂಗಳೂರು, ಅಕ್ಟೋಬರ್ 30: ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು 5/12/2023 ಕೊನೆಯ ದಿನವಾಗಿದೆ.
ಶೀಘ್ರಲಿಪಿಗಾರರು (Stenographer Grade-III) 10, ಬೆರಳಚ್ಚುಗಾರರು (Typist) 6, ಬೆರಳಚ್ಚು ನಕಲುಗಾರರು (Typist-Copyist) 2 ಮತ್ತು ಜವಾನ (Peon) 36 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ https://dk.dcourts.gov.in/notice-category/recruitments ನಲ್ಲಿ ನೀಡಲಾದ ಲಿಂಕ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಆನ್‌ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹುದ್ದೆಗಳ ವಿವರ; ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-I ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿ 40 ವರ್ಷಗಳು. ಪ್ರವರ್ಗ 2-ಎ, 2-ಬಿ, 3-ಎ ಮತ್ತು 3-ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ದೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.
ಮಾಜಿ ಸೈನಿಕರಿಗೆ ಗರಿಷ್ಠ ವಯೋಮಿತಿಯಲ್ಲಿ ಅವರು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವರೋ ಆ ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ ಇರುತ್ತದೆ. ವಿಧವೆಯರು, ಜೀತಕಾರ್ಮಿಕರು ಮತ್ತು ಅಂಗವಿಕಲರು ಸಂಬಂಧಿಸಿದ ಪ್ರಾಧಿಕಾರಗಳು ನೀಡುವ ಪ್ರಮಾಣ ಪತ್ರ ಹೊಂದಿದ್ದಲ್ಲಿ ವಯೋಮಿತಿಯಲ್ಲಿ ಗರಿಷ್ಠ 10 ವರ್ಷಗಳ ಸಡಿಲಿಕೆ ನೀಡಲಾಗುವುದು. 'ಜೀತ FDF' DOD Bonded Labour System (Abolition) Act 1976 (Central Act 19 of 1976) Karnataka Bonded Labour System (Abolition) Ordinance 1975 ರ ಅಡಿಯಲ್ಲಿ ಮಾಡಲಾದ ನಿಯಮಗಳ ಮೇರೆಗೆ ಜೀತ ಕಾರ್ಮಿಕ ಪದ್ಧತಿಯಿಂದ ಮುಕ್ತನಾದ ವ್ಯಕ್ತಿ.
ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳ ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಭ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸೇವೆ ಸಲ್ಲಿಸಿದ್ದರೆ ಅಷ್ಟು ವರ್ಷಗಳ ಅಥವಾ 05 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು. ಅಭ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ ಪೂರ್ಣ ಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 6/12/2023 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3 ಬಿಗೆ ಸೇರಿದ ಅಭ್ಯರ್ಥಿಗಳಿಗೆ 200 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಎಲ್ಲಾ ಅಂಗವಿಕಲ ಆಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಭ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಪ್ರಾಧಿಕಾರವು ಹೊಣೆಯಾಗುವುದಿಲ್ಲ.
ಅರ್ಹ ಅಭ್ಯರ್ಥಿಗಳಿಗೆ SMS/ E-Mail ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹತಾ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಅರ್ಹತಾ ಪರೀಕ್ಷೆಗೆ ಕರೆಯಲಾಗುವುದು.












Click it and Unblock the Notifications