ದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗ ನೇಮಕಾತಿ, 34 ಹುದ್ದೆ
ಮಂಗಳೂರು, ಸೆಪ್ಟೆಂಬರ್ 25 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು 31/10/2018 ಕೊನೆಯ ದಿನವಾಗಿದೆ.
34 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 1/10/2018 ರಿಂದ 31/10/2018ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 2/11/2018 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅರ್ಹತೆಗಳು
* ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಇ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
* ಕಂಪ್ಯೂಟರ್ ಜ್ಞಾನ ಹೊಂದಿರಬೇಕು
* ವೃತ್ತಿಪರ ಕೋರ್ಸ್ ಹಾಗೂ ಇತರೆ ಯಾವುದೇ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಲ್ಲ. ಜೆಓಸಿ, ಡಿಪ್ಲೊಮಾ ಇನ್ನಿತರ ವಿದ್ಯಾರ್ಹತೆಯನ್ನು ಈ ಹುದ್ದೆಗೆ ಪರಿಗಣಿಸುವುದಿಲ್ಲ.
ವಯೋಮಿತಿ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಕನಿಷ್ಟ 18 ವರ್ಷ, ಗರಿಷ್ಟ 40 ವರ್ಷಗಳು. 2ಎ/2ಬಿ/3ಎ/3ಬಿ ಕನಿಷ್ಟ 18, ಗರಿಷ್ಟ 38 ವರ್ಷಗಳು. ಸಾಮಾನ್ಯ ವರ್ಗ ಕನಿಷ್ಟ 18, ಗರಿಷ್ಟ 35 ವರ್ಷಗಳು.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 250 ರೂ.ಗಳು. ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗಕ್ಕೆ 500 ರೂ.. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications