Anganawadi Recruitment: 277 ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಸೆಪ್ಟಂಬರ್ 14: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ನೇಮಕಾತಿ ಹೆಚ್ಚಿನ ಮಾಹಿತಿ ಇಲ್ಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 277 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವ್ಯಾಪ್ತಿಯ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶ ಎನ್ನಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 10 ರ ಮೊದಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ
ಅಂಗನವಾಡಿ ಕಾರ್ಯಕರ್ತೆ-56
ಅಂಗನವಾಡಿ ಸಹಾಯಕಿ 221
ಒಟ್ಟು ಹುದ್ದೆ: 277
ಪೋಸ್ಟಿಂಗ್: ದಕ್ಷಿಣ ಕನ್ನಡ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆ ಕೊನೆ ದಿನ: ಅಕ್ಟೋಬರ್ 10
ಅಭ್ಯರ್ಥಿಗಳ ವಿದ್ಯಾರ್ಹತೆ
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಉತ್ತೀರ್ಣವಾಗಿರಬೇಕು. ಇನ್ನೂ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.
ಅಭ್ಯರ್ಥಿಗಳ ವಯಸ್ಸಿನ ಮಿತಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷದೊಳಗಿರಬೇಕು. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆಗೆ ಅವಕಾಶ ಇದೆ.
ಅರ್ಜಿ ಸಲ್ಲಿಕೆ ವಿಧಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಾರ, ಅಭ್ಯರ್ಥಿಗಳು ಮೊದಲು ಅಧಿಕೃತ https://karnemakaone.kar.nic.in/abcd/ ವೆಬ್‌ಸೈಟ್ ಗೆ ಭೇಟಿ ನೀಡಬೇಕು. WCD ದಕ್ಷಿಣ ಕನ್ನಡ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರ ಭರ್ತಿ ಮಾಡಬೇಕು. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಬೇಕು. ಅಗತ್ಯ ಎಲ್ಲ ಮಾಹಿತಿ ಹಾಕಿ ಸಬ್ಮಿಟ್ ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಯಾವುದಕ್ಕೂ ಒಮ್ಮೆ WCD ದಕ್ಷಿಣ ಕನ್ನಡ ನೇಮಕಾತಿ 2025 ಪ್ರಕಟಣೆ ಪೂರ್ತಿ ಓದಿಕೊಳ್ಳಬೇಕು.












Click it and Unblock the Notifications