ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ನೇಮಕಾತಿ, ವಿವರ

ದಾವಣಗೆರೆ, ಆಗಸ್ಟ್ 04: ದಾವಣಗೆರೆ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.

ದಾವಣಗೆರೆ ತಾಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 82 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Davanagere Anganwadi Worker And Helper Recruitment August 2024

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಮೂಲಕ ಸಲ್ಲಿಸಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಆಹ್ವಾನ: ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಕರೆಯಲಾಗಿದೆ.

ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ. ಅರ್ಜಿಯನ್ನು http://karnemakaone.kar.nic.in/abcd/ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ 08192-263219, ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ 08192-241431, ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ 08196-227132, ಹೊನ್ನಾಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ 08188-251283, ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ 08189-228010 ಸಂಪರ್ಕಿಸಬಹುದು.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿವಮೊಗ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ.

ಶಿವಮೊಗ್ಗ ಕಾರ್ಯಕರ್ತೆಯರು 34, ಸಹಾಯಕಿಯರು 118, ಭದ್ರಾವತಿ ಕಾರ್ಯಕರ್ತೆಯರು 10, ಸಹಾಯಕಿಯರು 72, ಹೊಸನಗರ ಕಾರ್ಯಕರ್ತೆಯರು 07, ಸಹಾಯಕಿಯರು 35, ಸಾಗರ ಕಾರ್ಯಕರ್ತೆಯರು 21, ಸಹಾಯಕಿಯರು 62, ಶಿಕಾರಿಪುರ ಕಾರ್ಯಕರ್ತೆಯರು 08, ಸಹಾಯಕಿಯರು 55, ಸೊರಬ ಕಾರ್ಯಕರ್ತೆಯರು 38, ಸಹಾಯಕಿಯರು 65, ತೀರ್ಥಹಳ್ಳಿ ಕಾರ್ಯಕರ್ತೆಯರು 09, ಸಹಾಯಕಿಯರು 41 ಹುದ್ದೆಗಳಿಗೆ.

ಆಸಕ್ತರು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+