Govt Jobs 2024: ದಾವಣಗೆರೆಯಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ವೇತನದ ವಿವರ
ಬೆಂಗಳೂರು, ಜನವರಿ 29: ದಾವಣಗೆರೆಯಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ. ಇಲ್ಲಿನ ನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದ್ದು, ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
ದಾವಣಗೆರೆಯ ಮಹಾನಗರ ಪಾಲಿಕೆಯಲ್ಲಿ ಒಟ್ಟು 119 ಪೌರಕಾರ್ಮಿಕ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಈ ಅವಕಾಶ ಸದುಪಯೋಗ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೂ ಮೊದಲು ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ ಇನ್ನಿತರ ಮಾಹಿತಿ ತಿಳಿಯಿರಿ.

ನೇಮಕಾತಿ ಪ್ರಕ್ರಿಯೆ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ದಾವಣಗೆರೆ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಪೌರಕಾರ್ಮಿಕ
ಖಾಲಿ ಹುದ್ದೆ ಸಂಖ್ಯೆ: 119
ಮಾಸಿಕ ವೇತನ: ₹17,000 ನಿಂದ 28,950 ರೂಪಾಯಿ
ಪೋಸ್ಟಿಂಗ್: ದಾವಣಗೆರೆ
ಅರ್ಜಿ ಸಲ್ಲಿಕೆ ಕೊನೆ ದಿನ: ಜನವರಿ 30
ವಿದ್ಯಾರ್ಹತೆ- ವಯೋಮಿತಿ ಮಾಹಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಿದ್ಯಾರ್ಹತೆ ಕೇಳಲಾಗಿಲ್ಲ. ಬದಲಾಗಿ ಅವರಿಗೆ ಕನ್ನಡ ಭಾಷೆ ಮಾತನಾಡಲು ಕಡ್ಡಾಯವಾಗಿ ಬರಬೇಕು ಎಂದು ತಿಳಿಸಲಾಗಿದೆ. ಜೊತೆಗೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಗಲಿದೆ ಎಂದು ಮಹಾನಗರ ಪಾಲಿಕೆ ಅಧಿಸೂಚನೆ ತಿಳಿಸಿದೆ.

ಅರ್ಹತೆಗಳೇನು?
ದಾವಣಗೆರೆ ಮಹಾನಗರ ಪಾಲಿಕೆ ಅಧಿಸೂಚನೆ ಪ್ರಕಾರ, ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಕಳೆದ 2 ವರ್ಷಗಳಿಂದ ಸತತವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಆಯ್ಕೆ ಪ್ರಕ್ರಿಯೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈವರೆಗೆ ಮಾಡಿರುವ ಕೆಲಸದ ಅನುಭವ ಆಧಾರದಲ್ಲಿ ಆಯ್ಕೆ ನಡೆಯಲಿದೆ. ಪೌರ ಕಾರ್ಮಿಕರಿಗೆ ಸಂದರ್ಶನ ನಡೆಸಲಿದ್ದು, ಅದರಲ್ಲಿ ಅವರು ಪಾಲ್ಗೊಳ್ಳಬೇಕಿರುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳ ಸಹಿತ ' ದಾವಣಗೆರೆ ಮಹಾನಗರ ಪಾಲಿಕೆಯ ಪ್ರಧಾನ ಕಛೇರಿ, ರೈಲ್ವೆ ನಿಲ್ದಾಣದ ಎದುರು, ಪಿ.ಬಿ ರಸ್ತೆ, ದಾವಣಗೆರೆ' ಈ ವಿಳಾಸಕ್ಕೆ ಆಫ್‌ಲೈನ್ ಮೂಲಕ ಅಂದರೆ ಪೋಸ್ಟ್ ಮೂಲಕ ಸಲ್ಲಿಸಬೇಕು ಎಂದು ಅಧಿಸೂಚನೆ ತಿಳಿಸಿದೆ.












Click it and Unblock the Notifications