ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ: ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ದಾವಣಗೆರೆ ಮಾ.15: ಮಲೆಬೆನ್ನೂರು, ಹೊನ್ನಾಳಿ ಪುರಸಭೆ ಮತ್ತು ನ್ಯಾಮತಿ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 03 ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇದ್ದು ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು, ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಉತ್ತಮ ಜ್ಞಾನವುಳ್ಳವರಾಗಿರಬೇಕು. ಅವಧಿ ಒಂದು ವರ್ಷಕ್ಕೆ ಕನ್ಸಲ್‍ಟೆಂಟ್ ಆಗಿ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಯು ತೃಪ್ತಿದಾಯಕವಾಗಿ ಕಾರ್ಯ ಪೂರೈಸಿದಲ್ಲಿ ಅವರ ಸೇವೆಯನ್ನು ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಅಭ್ಯರ್ಥಿಗಳು, ಜನನ ಪ್ರಮಾಣ ಪತ್ರ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಪ್ರಮಾಣ ಪತ್ರಗಳ ಪ್ರತಿಗಳನ್ನು ಹಾಗೂ ಒಂದು ಭಾವಚಿತ್ರವನ್ನು ಆರ್ಜಿಯೊಂದಿಗೆ ಲಗತ್ತಿಸಬೇಕು.

ಮಡಿಕೇರಿಯಲ್ಲಿ ಉದ್ಯೋಗ ಮೇಳ, ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿಯಲ್ಲಿ ಉದ್ಯೋಗ ಮೇಳ, ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದಲ್ಲಿ ಕನ್ಸಲ್‍ಟೆಂಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ (ವಸ್ತುನಿಷ್ಟ ಪರೀಕ್ಷೆ) ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Davanagere: Junior programmer jobs in many Town Panchayats

ಅರ್ಜಿ ನಮೂನೆಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 22, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇದೇ ಕಚೇರಿಗೆ ಅರ್ಜಿಯನ್ನು ಮಾ.31 ರ ಸಂಜೆ 05-30 ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

****

ಮಾ. 21 ರಿಂದ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳ ನೇರ ಸಂದರ್ಶನ ಪುನಾರಂಭ

ದಾವಣಗೆರೆ: ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಸೋಕು ಇಳಿಕೆಯಾಗಿರುವುದರಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿನ ಬಂದಿಗಳಿಗೆ ಸಂದರ್ಶಿಸುವ ಸಂಬಂಧಿಗಳಿಗೆ ಸಂದರ್ಶನವನ್ನು ಮಾ.21 ರಿಂದ ಪುನರಾರಂಭಿಸಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಅವರು ತಿಳಿಸಿದ್ದಾರೆ.

ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗ್ರತ ಕ್ರಮವಾಗಿ, ದಾವಣಗೆರೆ ಕಾರಾಗೃಹದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿತ ಸಂದರ್ಶನವನ್ನು ಮಾತ್ರ ನೀಡಲಾಗುವುದು. ಹೀಗಾಗಿ ಬಂದಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ನೋಂದಾಯಿಸಿಕೊಂಡು ನಿಗಧಿಪಡಿಸಲಾಗುವ ದಿನ ಮತ್ತು ಸಮಯಕ್ಕೆ ಆಗಮಿಸಬೇಕು.

ಸಂದರ್ಶನಕ್ಕೆ ಬರುವ ಸಂದರ್ಶಕರು ಯಾವುದೇ ರೀತಿಯ ಕೋವಿಡ್ ರೋಗ ಲಕ್ಷಣಗಳನ್ನು ಹೊಂದಿರಬಾರದು ಹಾಗೂ ಕಡ್ಡಾಯವಾಗಿ ಎರಡು ಡೋಸ್ ಲಸಿಕೆಗಳನ್ನು ಹಾಕಿಸಿಕೊಂಡಿರುವ ಲಸಿಕಾ ಪ್ರಮಾಣಾ ಪತ್ರವನ್ನು ಹಾಜರುಪಡಿಸಬೇಕು ಅಲ್ಲದೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-254446, ಮೊಬೈಲ್ ಸಂಖ್ಯೆ 9480806464, ಇಮೇಲ್ ವಿಳಾಸ [email protected] ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಭಾಗೀರಥಿ ಎಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Davanagere: Junior programmer jobs in malebennur, Honnali, Nyamati Town Panchayats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X