ದಾವಣಗೆರೆ ಕೋರ್ಟ್‌ನಲ್ಲಿ 28 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 18 : ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 15/2/2019 ಕೊನೆಯ ದಿನವಾಗಿದೆ.
ಬೆರಳಚ್ಚುಗಾರರು 8, ಶೀಘ್ರಲಿಪಿಗಾರರು 8, ಬೆರಳಚ್ಚು ನಕಲುಗಾರ 2, ಜವಾನ 4 ಸೇರಿದಂತೆ 28 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
ಪ್ರತಿ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. 7ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ತನಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.
ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್, ಮುಖ್ಯ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಮೊದಲು ನೇಮಕಾತಿ ಆದೇಶವನ್ನು ಸರಿಯಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ವಿಳಾಸ












Click it and Unblock the Notifications