Jobs: ದಾವಣಗೆರೆಯಲ್ಲಿ ಉದ್ಯೋಗ ಮೇಳ, ಕೆಲಸ ಖಾಲಿ ಇದೆ

ದಾವಣಗೆರೆ, ಜುಲೈ. 05: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6 ರಂದು (ಶನಿವಾರ) ಬೆಳಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ 20 ಕ್ಕಿಂತ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿ.ಫಾರ್ಮ, ಬಿ.ಫಾರ್ಮ, ಡಿಪ್ಲೊಮಾ, ಬಿಇ, ಬಿ ಟೆಕ್, ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Davangere District Employment Exchange office conduct Job fair

ಆಸಕ್ತ ಅಭ್ಯರ್ಥಿಗಳು ಕನಿಷ್ಠ 15 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ಜೊತೆಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ: 8105122556, 9591088202, ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ

ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ.29 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Davangere District Employment Exchange office conduct Job fair

ಖಾಲಿ ಇರುವ ಹುದ್ದೆಗಳು:

ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ(ನರಗನಹಳ್ಳಿ) , ದೊಡ್ಡಬ್ಬಿಹೆರೆ , ಅಣಜಿ , ಗುಡಾಳು ಇಲ್ಲಿ ಖಾಲಿ ಇರುತ್ತವೆ.

ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಅಧಿಕಾರಿಗಳಿಂದ ದೃಢೀಕರಿಸಿ ವೆಬ್‍ಸೈಟ್ davanagere.nic.in ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25 ಗೆ ಜುಲೈ 20 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು ,ಅರ್ಜಿದಾರರು ಖಾಲಿ ಇರುವ ಗ್ರಾಮಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು.

ಗ್ರಾಮಸಹಾಯಕ ತಳವಾರರು, ತೋಟೆಗಳು, ನೀರುಗಂಟೆಗಳು ವಾಲಿಕರ್ಸ್, ಮಹರಸ್, ಬಾರಿಕರಸ್, ವೀರಾಡಿಗಳು, ಬಲೂತಿದಾರಸ್ ತಳಿಯಾರಿಸ್ ವೆಟಿಸ್, ಕುಲುವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು, ಅರ್ಜಿದಾರರು 25 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿರುತ್ತದೆ.

ಅರ್ಜಿಯೊಂದಿಗೆ ಜನ್ಮ ದಿನಾಂಕ (ವರ್ಗಾವಣೆ ಪತ್ರ, ಎಸ್.ಎಸ್.ಎಲ್ ಸಿ ಅಂಕಪಟ್ಟಿ ಲಗತ್ತಿಸುವುದು ), ವಾಸಸ್ಥಳ ದೃಢೀಕರಣ, (ಸಂಬಂಧಿಸಿದ ಉಪತಹಸೀಲ್ದಾರರಿಂದ ) ಪಡೆದ ಪತ್ರ ಲಗತ್ತಿಸುವುದು, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ, ಪಡಿತರ ಚೀಟಿ, ವ್ಯಾಸಾಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಚೇರಿ ಸಲ್ಲಿಸಬೇಕೆಂದು ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+