ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜನವರಿ 17 : ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/2/2019 ಕೊನೆಯ ದಿನವಾಗಿದೆ.
ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 8 ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಮತ್ತು ಇಮೇಲ್ ವಿಳಾಸವನ್ನು ಕಡ್ಡಾಯವಾಗಿ ನೀಡಬೇಕು.
ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2ಎ/2ಬಿ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳಲ್ಲಿ ಅಥವ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಮೊದಲು ನೇಮಕಾತಿ ಆದೇಶ ಮತ್ತು ನಿಯಮಗಳನ್ನು ಸರಿಯಾಗಿ ಓದಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications