KSRP ಸಬ್ ಇನ್‌ಸ್ಪೆಕ್ಟರ್ ನೇಮಕಾತಿ: ಡಿ. 20ಕ್ಕೆ ಲಿಖಿತ ಪರೀಕ್ಷೆ

ಬೆಂಗಳೂರು, ಡಿಸೆಂಬರ್ 15: ವಿಶೇಷ ಮೀಸಲು (KSRP) ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ( KSISF ) ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 20 ರಂದು ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ ಹದಿಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪೊಲೀಸ್ ನೇಮಕಾತಿ ಅಂತರ್ಜಾಲ ತಾಣ www.ksp.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಕರ ಪತ್ರ ಡೌನ್ಲೋಡ್ ಮಾಡಿಕೊಂಡು ಸೂಚಿತ ಪರಿಕ್ಷಾ ಕೇಂದ್ರಕ್ಕೆ ಹಾಜರಾಗಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಪ್ರಕಟಣೆ ತಿಳಿಸಿದೆ.

Dec 20: written exam for the post of KSRP Sub inspector

ಸುಮಾರು 7340 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಬಳಿಕ ಮೌಖಿಕ ಪರೀಕ್ಷೆ ನಡೆಯಲಿದ್ದು, ತದನಂತರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. 2020 ಜೂನ್ ನಲ್ಲಿ ರಾಜ್ಯ ವಿಶೇಷ ಮೀಸಲು ಪಡೆ ಹಾಗೂ ಕೈಗಾರಿಕಾ ಭದ್ರತಾ ಪಡೆ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ದೈಹಿಕ ಪರೀಕ್ಷೆ ಯಲ್ಲಿ ಆಯ್ಕೆಯಾದವರಿಗೆ ಇದೀಗ ಲಿಖಿತ ಪರೀಕ್ಷೆ ಬೆಂಗಳೂರಿನ ಹದಿಮೂರು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+