Metro Recruitment: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಜ.28ರೊಳಗೆ ಅರ್ಜಿ ಸಲ್ಲಿಸಿ

Metro Recruitment: ಮೆಟ್ರೋ ನಿಗಮದಲ್ಲಿ ಉದ್ಯೋಗ ಬಯಸುವ ಆಸಕ್ತಿ ಹೊಂದಿರುವ ಅರ್ಹರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (DMRC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜನವರಿ 28ರಂದು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ಯೋಗ ಮಾಡುವ ಅವಕಾಶ ಇದಾಗಿದೆ. ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (DMRC) ತನ್ನಲ್ಲಿ ಖಾಲಿ ಇರುವ ಸಿಸ್ಟಮ್ ಸೂಪರ್‌ವೈಸರ್ ಹಾಗೂ ಸಿಸ್ಟಮ್ ಟೆಕ್ನಿಷಿಯನ್ ಸೇರಿ ಒಟ್ಟು 13 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮೊದಲು ಇಲ್ಲಿ ನೀಡಲಾಗಿರುವ ನೇಮಕಾತಿ ಪೂರ್ಣ ಮಾಹಿತಿ ಗಮನಿಸಬೇಕು.

Delhi Metro Recruitment Application Invite for 13 Vacancies of DMRC

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (DMRC)

ಹುದ್ದೆಗಳು ಹೆಸರು: ಸಿಸ್ಟಮ್ ಸೂಪರ್‌ವೈಸರ್, ಸಿಸ್ಟಮ್ ಟೆಕ್ನಿಷಿಯನ್

ಒಟ್ಟು ಹುದ್ದೆಗಳು: 13

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಜನವರಿ 28

ಗರಿಷ್ಠ ವಯಸ್ಸು: 40 ವರ್ಷ

ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಅಥವಾ ಇ-ಮೇಲ್

ಮಾಸಿಕ ವೇತನ: ನಿಯಮಾನುಸಾರ

ಅಭ್ಯರ್ಥಿಗಳ ವಿದ್ಯಾರ್ಹತೆ

ಈ ದೆಹಲಿ ಮೆಟ್ರೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ ಪದವಿ ಪಡೆದಿರಬೇಕು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ ಎಷ್ಟು

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು 18 ವರ್ಷ ಹಾಗೂ ಗರಿಷ್ಠ ವಯಸ್ಸು 40 ವರ್ಷಗಳು ಎಂದು ನಿಗದಿ ಮಾಡಲಾಗಿದೆ.

ನೇಮಕಾತಿ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನ ನಡೆಸಲಾಗುತ್ತಿದೆ. ಅಲ್ಲಿ ಆಯ್ಕೆ ಆದವರಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಇದಕ್ಕೂ ಮೊದಲು ಅಭ್ಯರ್ಥಿಗಳಿಗೆ ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ 46,000 ರೂ.ನಿಂದ 65,000 ರೂ.ವರೆಗೆ ಮಾಸಿಕ ವೇತನ ನೀಡಲಾಗುವುದು.

ಈ ಕೂಡಲೇ ಅಭ್ಯರ್ಥಿಗಳು ದಾಖಲೆ ಸಮೇತರಾಗಿ ಅರ್ಜಿ ಭರ್ತಿ ಮಾಡಬೇಕು. ಕೊನೆಯ ದಿನಾಂಕದವರೆಗೆ ಕಾಯದೇ ಈಗಲೇ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳು ಅರ್ಜಿ ಜೊತೆಗಿರಲಿದೆ. ಅರ್ಜಿಯನ್ನು ದೆಹಲಿ ಮೆಟ್ರೋ ವಿಳಾಸಕ್ಕೆ ಇಲ್ಲವೇ, ಇಮೇಲ್ ಮೂಲಕ ಕಳುಹಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+