ವಾರ್ತಾ ಇಲಾಖೆ; 289 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ

ಬೆಂಗಳೂರು, ಮಾರ್ಚ್ 09: ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 289 ಹುದ್ದೆಗಳು ಖಾಲಿ ಇವೆ. ಶೀಘ್ರದಲ್ಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಸದಸ್ಯ ಡಾ. ಚಂದ್ರಶೇಖರ್ ಬಿ. ಪಾಟೀಲ್‌ ಈ ಕುರಿತು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು. ಸರ್ಕಾರ ಕಲಾಪದಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು? ಎಂದು ಪ್ರಶ್ನಿಸಲಾಗಿತ್ತು. ಇಲಾಖೆಯಲ್ಲಿ ಎ, ಬಿ, ಸಿ ಮತ್ತು ಡಿ ವರ್ಗಗಳ 289 ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ.

Information

ಯಾವ ಹುದ್ದೆ ಎಷ್ಟು?; ಗ್ರೂಪ್ ಎ 21 ಹುದ್ದೆಗಳು, ಗ್ರೂಪ್ ಬಿ 11 ಹುದ್ದೆಗಳು, ಗ್ರೂಪ್ ಸಿ 181 ಹುದ್ದೆಗಳು ಮತ್ತು ಗ್ರೂಪ್ ಡಿ 76 ಹುದ್ದೆಗಳು ಖಾಲಿ ಇವೆ ಎಂದು ಸರ್ಕಾರ ಲಿಖಿತ ಉತ್ತರದಲ್ಲಿ ತಿಳಿಸಿದೆ.

ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕೈಗೊಂಡ ಕ್ರಮಗಳು ಏನು? ಎಂದು ಸಹ ಪರಿಷತ್ ಸದಸ್ಯರ ಕೇಳಿದ್ದಾರೆ. ಇದಕ್ಕೆ ಸಹ ಸರ್ಕಾರ ವಿವರಣೆ ನೀಡಿದೆ.

ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮವು 1978ರಲ್ಲಿ ಸಮಗ್ರ ಪರಿಷ್ಕರಣೆಗೆ ಒಳಗಾಗಿದ್ದು, ನಂತರ ಇದುವರೆಗೂ ಪರಿಷ್ಕರಣೆಯಾಗಿರುವುದಿಲ್ಲ. ಹಾಲಿ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಆಧುನಿಕ ವಿದ್ಯಾರ್ಹತೆ ಮತ್ತು ಸೇವಾನುಭವದ ಆಧಾರದ ಮೇಲೆ ಸಮಗ್ರವಾಗಿ ಪರಿಷ್ಕರಿಸಲು ಕ್ರಮವಹಿಸುತ್ತಿರುವ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಕೊಡಗಿನಲ್ಲಿ ಕೆಲಸ ಖಾಲಿ ಇದೆ; ಸೋಮವಾರಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆ ದಂಡಿನಪೇಟೆ-1, ಹಾದ್ರೆ ಹೆರೂರು(ಮಿನಿ), ಚೌಡ್ಲು (ಮಿನಿ), ಅಂಗನವಾಡಿ ಸಹಾಯಕಿಯರ ಹುದ್ದೆಗೆ ಯಡವಾರೆ, ಮಾದಾಪುರ-ಎ, ಅಬ್ಬೂರುಕಟ್ಟೆ, ಶಿರಂಗಾಲ-3, ಶಾಂತಳ್ಳಿ, ಯಡವನಾಡು, ಅಂಗನವಾಡಿ ಕೇಂದ್ರದಲ್ಲಿ ಪ.ಜಾತಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಮತ್ತು ಲಕ್ಕೇರಿ ಪೈಸಾರಿ ಚಿಕ್ಕಭಂಡಾರ ಅಂಗನವಾಡಿ ಕೇಂದ್ರದಲ್ಲಿ ಪ.ಜಾತಿಗೆ ಸೇರಿದ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್ಎಲ್‌ಸಿ ಉತ್ತೀರ್ಣರಾಗಿರಬೇಕು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು.

ಅರ್ಜಿ ಸಲ್ಲಿಸುವವರು 18 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ವಿಕಲಚೇತನ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅಭ್ಯರ್ಥಿಗಳು ಅರ್ಜಿಗಳನ್ನು www.anganwadirecruit.kar.nic.in ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಇತರೆ ಯಾವುದೇ ರೂಪದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ದೂರವಾಣಿ ಸಂಖ್ಯೆ 08276-282281 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+