ನೋಂದಣಿ ಮತ್ತು ಮುದ್ರಾಂಕ ಇಲಾಖೆ; ಗ್ರೂಪ್-ಡಿ ನೇರ ನೇಮಕಾತಿ

ಬೆಂಗಳೂರು, ಫೆಬ್ರವರಿ 16; ನೋಂದಣಿ ಮತ್ತು ಮುದ್ರಾಂಕ ಇಲಾಖೆ ಗ್ರೂಪ್-ಡಿ (ಜವಾನರ) ಹುದ್ದೆಯ ನೇರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 31/3/2022 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳ ಬ್ಯಾಕ್‌ಲಾಗ್ ಗ್ರೂಪ್-ಡಿ (ಜವಾನರ) ಹುದ್ದೆಯ ನೇರ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅಂಚೆ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ.

ಇದನ್ನು ಹೊರತುಪಡಿಸಿ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ. ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಬಾರದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

Department Of Stamps And Registration Group D Recruitment

httpps://igr.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಲಭ್ಯವಿದೆ. ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿರುವ ಅರ್ಹತೆಯ ಪ್ರಮಾಣ ಪತ್ರವನ್ನು ಲಗತ್ತಿಸಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ರಿಂದ 28,950 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಎಸ್. ಎಸ್.‌ ಎಲ್. ಸಿ. ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಮತ್ತು 14/2/2022 ಪ್ರಕಟಣೆಯ ದಿನಾಂಕದೊಳಗೆ ಗರಿಷ್ಠ 40 ವರ್ಷ ಮೀರಿರಬಾರದು. ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸುವಂತಿಲ್ಲ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಅಭ್ಯರ್ಥಿಯು ಆಯ್ಕೆಗೆ ಅರ್ಹತೆ ಪಡೆಯುವುದಿಲ್ಲ.

ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿ ಜವಾಬ್ದಾರಿಯಾಗಿದೆ. ಸಂಪೂರ್ಣ ಮಾಹಿತಿ ನೀಡದ, ತಪ್ಪು ಮಾಹಿತಿ ನೀಡಿದ, ಅಭ್ಯರ್ಥಿ ಸಹಿ ಇಲ್ಲದ, ಅಭ್ಯರ್ಥಿ ಭಾವಚಿತ್ರ ಇಲ್ಲದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ಅರ್ಜಿ ಸ್ವೀಕಾರ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂರ ಬಂದ ಅರ್ಜಿಗಳನ್ನು ಸ್ವೀಕಾರ ಮಾಡುವುದಿಲ್ಲ. ಸರಿಯಾದ ವಿಳಾಸಕ್ಕೆ ತಲುಪದಿದ್ದರೆ, ಸ್ವೀಕೃತವಾಗದಿದ್ದರೆ ಆಯ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.

ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿ ಭರ್ತಿ ಮಾಡಿ ಬೇರೆ ಬೇರೆ ಅರ್ಜಿಗಳಲ್ಲಿ ವಿಭಿನ್ನವಾದ ಮಾಹಿತಿಯನ್ನು ನಮೂದಿಸಿದಲ್ಲಿ ಅಂತಹ ಅಭ್ಯರ್ಥಿಯ ಎಲ್ಲಾ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ಕರ್ನಾಟಕದ ಯಾವುದೇ ಸರ್ಕಾರಿ ಇಲಾಖೆ, ಕೇಂದ್ರ ಸರ್ಕಾರಿ ಇಲಾಖೆ ಅಥವ ಅರೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಸೇವೆಯಿಂದ ವಜಾಗೊಂಡಿರುವ ನೌಕರರು ನೇಮಕಾತಿಗೆ ಅರ್ಹರಲ್ಲ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; ಅರ್ಜಿ ಮತ್ತು ದಾಖಲಾತಿಗಳ ಲಕೋಟೆ ಮೇಲೆ ಬ್ಯಾಕ್ ಲಾಗ್ ಗ್ರೂಪ್-ಡಿ (ಜವಾನರ) ಹುದ್ದೆಗೆ ಅರ್ಜಿ ಎಂದು ಬರೆದು ಸಲ್ಲಿಸಬೇಕು

ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರ ಕಛೇರಿ. 8ನೇ ಮಹಡಿ, ಕಂದಾಯ ಭವನ, ಕೆ. ಜಿ. ರಸ್ತೆ, ಬೆಂಗಳೂರು 560009.

ಅರ್ಜಿಯ ಜೊತೆ ಲಗತ್ತಿಸಬೇಕಾದ ದಾಖಲೆಗಳು

* ಸ್ವ ಹಸ್ತಾಕ್ಷರವಿರುವ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಅರ್ಜಿಗೆ ಲಗತ್ತಿಸಬೇಕು
* ದೃಢೀಕರಿಸಿದ ವರ್ಗಾವಣೆ ಪತ್ರ ಅಥವ ಅಂಕಪಟ್ಟಿ
* ದೃಢೀಕರಿಸಿದ ಜಾತಿ ಪ್ರಮಾಣ ಪತ್ರ
* ದೃಢೀಕರಿಸಿದ ನಿಗದಿತ ಅರ್ಹತಾ ಪರೀಕ್ಷೆಯ ಅಂಕಪಟ್ಟಿಯ ಪ್ರತಿಗಳು

ಅಭ್ಯರ್ಥಿಯು ಎಲ್ಲಾ ದಾಖಲಾತಿಗಳ/ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ಸೂಚನೆ ನೀಡಿದ ಸಮಯದಲ್ಲಿ ತಪ್ಪದೇ ಹಾಜರುಪಡಿಸಬೇಕು. ಅಭ್ಯರ್ಥಿ ಯಾವುದೇ ಇಲಾಖೆ ಅಥವ ಸಂಸ್ಥೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರೆ ಅಲ್ಲಿನ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ನಿರಾಪೇಕ್ಷಣ ಪತ್ರ ಲಗತ್ತಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+