ಧನಲಕ್ಷ್ಮೀ ಬ್ಯಾಂಕ್ ನೇಮಕಾತಿ; ಡಿಸೆಂಬರ್ 21ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 14; ಧನಲಕ್ಷ್ಮೀ ಬ್ಯಾಂಕ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 21 ಡಿಸೆಂಬರ್ ಕೊನೆಯ ದಿನವಾಗಿದೆ.
ಧನಲಕ್ಷ್ಮೀ ಬ್ಯಾಂಕ್ ಜ್ಯೂನಿಯರ್ ಆಫೀಸರ್ಸ್ ಮತ್ತು ಸೀನಿಯರ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಒಟ್ಟು ಎಷ್ಟು ಹುದ್ದೆಗಳಿವೆ ಎಂದು ಬ್ಯಾಂಕ್ ಸ್ಪಷ್ಟಪಡಿಸಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಧನಲಕ್ಷ್ಮೀ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ವೇತನ ನಿಗದಿ ಮಾಡಲಾಗಿದೆ. ಜ್ಯೂನಿಯರ್ ಆಫೀಸರ್ಸ್ ಹುದ್ದೆಗಳಿಗೆ ಪದವಿ ಮತ್ತು ಸೀನಿಯರ್ ಆಫೀಸರ್ಸ್ ಹುದ್ದೆಗಳಿಗೆ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.
ಧನಲಕ್ಷ್ಮೀ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗೆ ಕನಷ್ಠ ವಯೋಮಿತಿ 21 ವರ್ಷಗಳು. ಗರಿಷ್ಠ ವಯೋಮಿತಿ 25 ವರ್ಷಗಳು 31 ಮಾರ್ಚ್ 2023ಕ್ಕೆ ಅನ್ವಯವಾಗುವಂತೆ.
ಅರ್ಜಿ ಸಲ್ಲಿಕೆ ಮಾಡುವ ಎಲ್ಲಾ ಅಭ್ಯರ್ಥಿಗಳು ಆನ್‌ಲೈನ್ ಪೇಮೆಂಟ್ ಮೂಲಕ 708 ರೂ. ಶುಲ್ಕವನ್ನು ಪಾವತಿಸಬೇಕು. ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಧನಲಕ್ಷ್ಮೀ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡುವಾಗ ಸರಿಯಾದ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದು ಮಾಡಬೇಕು.
ವೆಬ್‌ಸೈಟ್‌ನಲ್ಲಿ ಅರ್ಜಿಯ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಸ್ಕ್ಯಾನ್ ಕಾಪಿಗಳನ್ನು ಅಪ್‌ಲೋಡ್ ಮಾಡಬೇಕು. ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ dhanbank.com. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು https://ibpsonline.ibps.in/dbljosooct23/ ಕ್ಲಿಕ್ ಮಾಡಿ.
ಎಚ್‌ಎಎಲ್ ತರಬೇತಿಗೆ ಅರ್ಜಿ ಹಾಕಿ; ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಫಿಟ್ಟರ್, ಟರ್ನರ್, ಯಂತ್ರಗಾರರು, ವೆಲ್ಡರ್, ಕೋಪ (ಸಿಒಪಿಎ), ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಕಾರ್ಪೆಂಟರ್, ಮೆಕಾನಿಕಲ್ ಆರ್ ಮತ್ತು ಸಿ, ಟೂಲ್ ಮತ್ತು ಡೈಮೆಕರ್, ಅಡ್ವಾನ್ಸ್‍ಡ್ ಸಿ ಎನ್‍ಸಿ ಮೆಶಿನಿಂಗ್ ಮತ್ತಿತರ ವೃತ್ತಿಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಹಾಕಬಹುದು.
ಈ ಟ್ರೇಡ್‍ಗಳಲ್ಲಿ ಐಟಿಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಿ ನೋಂದಣಿ ಸಂಖ್ಯೆಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಮೂದಿಸಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 30ರೊಳಗೆ ಸಲ್ಲಿಸಬೇಕು.
ಅರ್ಜಿಗಳನ್ನು ತಾಂತ್ರಿಕ ತರಬೇತಿ ಸಂಸ್ಥೆ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸುರಂಜನದಾಸ್ ರಸ್ತೆ, ವಿಮಾನಪುರ ಅಂಚೆ, ಬೆಂಗಳೂರು-560017 ಈ ವಿಳಾಸಕ್ಕೆ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗೆ ಮತ್ತು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ವೆಬ್‍ಸೈಟ್ www.hal-india.co.in ಎಕ್ಷ್-ಐಟಿಐ ಅಭ್ಯರ್ಥಿಗಳು ಪೋರ್ಟಲ್ www.apprenticeshipindia.org/candidate-registration ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.











Click it and Unblock the Notifications