ಧಾರವಾಡ; ಕೆಲಸ ಖಾಲಿ ಇದೆ, ನೇರ ಸಂದರ್ಶನದ ವಿವರ

ಧಾರವಾಡ, ಜನವರಿ 30: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 12ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯದಲ್ಲಿರುವ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ, ಕುಟುಂಬ ವಿಭಾಗದಲ್ಲಿ ಖಾಲಿ ಇರುವ ಪ್ರಯೋಗಾಲಯ ಸಹಾಯಕ, ಕಾರ್ಯಕ್ರಮ ಅಧಿಕಾರಿ, ಕಾರ್ಯಕ್ರಮ ನಿರ್ವಾಹಕರು ಮತ್ತು ಹಿರಿಯ ಕಾರ್ಯಕ್ರಮ ಅಧಿಕಾರಿ ಸೇರಿ 4 ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.

Dharwad Agriculture University Jobs Interview On February 12

ಆಸಕ್ತರು ಅರ್ಜಿ ನಮೂನೆಯ 2 ಪ್ರತಿಗಳೊಂದಿಗೆ ಫೆಬ್ರವರಿ 12 ರಂದು ಬೆಳಗ್ಗೆ 10.30ಕ್ಕೆ ವಿದ್ಯಾಧಿಕಾರಿಗಳು (ಸವಿ), ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2214234 ಹಾಗೂ ಕೃಷಿ ವಿಶ್ವವಿದ್ಯಾಲಯದ ಜಾಲತಾಣ www.uasd.eduಗೆ ಸಂಪರ್ಕಿಸಬಹುದು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್)ದ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಆಯೋಜನೆ ಮಾಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ ಮೂರನೇ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ.

ಬಳ್ಳಾರಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಓದಲು/ ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುತ್ತದೆ.

ಅರ್ಜಿಗಳನ್ನು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆಯ ಮೂಲಕ ನೋಂದಾಯಿಸಿಕೊಳ್ಳಬಹುದು. ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 7 ಕೊನೆಯ ದಿನವಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡದ ಸಿಡಾಕ್‍ನ ಜಂಟಿ ನಿರ್ದೇಶಕರ ಕಚೇರಿ ಅಥವಾ 7483538942/ 9449226221 ಸಂಖ್ಯೆಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+