ಧಾರವಾಡ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇದೆ
ಧಾರವಾಡ, ಮಾರ್ಚ್ 24; ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಮಹಿಳಾ ಅಭ್ಯರ್ಥಿಗಳು, ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಏಪ್ರಿಲ್ 19ರ ತನಕ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಶಿಶು ಅಭಿವೃದ್ಧಿ ಯೋಜನೆ ನವಲಗುಂದ, ಧಾರವಾಡ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಏಪ್ರಿಲ್ 19ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಧಾರವಾಡ ಗ್ರಾಮೀಣ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆಯರು ಮತ್ತು 20 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ.

ಧಾರವಾಡದ ಶಿವಾಜಿ ಸರ್ಕಲ್ ಹತ್ತಿರದ ಎಫ್. ಐ. ಹಂಚಿನಮನಿ ಬಿಲ್ಡಿಂಗ್‍ನಲ್ಲಿರುವ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮಾರ್ಚ್ 21ರಿಂದ ಅರ್ಜಿಗಳನ್ನು ಪಡೆದು, ಏಪ್ರಿಲ್ 19ರ ಸಂಜೆ 5.30ರೊಳಗೆ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 0836-2444838 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ನವಲಗುಂದ; ನವಲಗುಂದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವಲಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು, ಏಪ್ರಿಲ್ 19ರೊಳಗೆ ಭರ್ತಿ ಮಾಡಿ ವಾಪಸ್ ಕಚೇರಿಗೆ ಸಲ್ಲಿಕೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 08380-229618 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಅರಣ್ಯ ಇಲಾಖೆ ನೇಮಕಾತಿ; ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ವೃತ್ತದಲ್ಲಿ ಒಟ್ಟು 5 ಆನೆ ಕಾವಾಡಿಗ ಹುದ್ದೆಯ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ, ಅರ್ಹರು ಮಾರ್ಚ್ 30ರಿಂದ ಏಪ್ರಿಲ್ 29ರ ಸಂಜೆ 5.30ರ ತನಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತರು www.kfdrecruitment.in ವೆಬ್‌ಸೈಟ್ ಮೂಲಕ ಹಾಗೂ ಕಚೇರಿಯಲ್ಲಿ ಲಭ್ಯವಿರುವ ಅರ್ಜಿಗಳನ್ನು ಪಡೆದು ಸಲ್ಲಿಕೆ ಮಾಡಬಹುದಾಗಿದೆ ಎಂದು ಆನೆ ಕಾವಾಡಿಗ ಹುದ್ದೆಯ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರಿ ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications