• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಧಾರವಾಡ: ಮಹಿಳೆಯರಿಗೆ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

|

ಧಾರವಾಡ, ಜನವರಿ 19: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಪ್ರೆಂಟಿಸ್ ತರಬೇತಿ ಅವಧಿಯು ಹತ್ತು ತಿಂಗಳದ್ದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ. ಕಂಪ್ಯೂಟರ್ ಜ್ಞಾನ, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರುವ 40 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುವುದು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಧಾರವಾಡ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಧಾರವಾಡ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಇದೇ ಜನವರಿ 25ರೊಳಗೆ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ನಮೂನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಧಾರವಾಡ ಅಥವಾ ಸಂಪರ್ಕ ಸಂಖ್ಯೆ 0836- 2447469ಗೆ ಕರೆ ಮಾಡಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡಿ.ಡೊಳ್ಳಿನ ತಿಳಿಸಿದ್ದಾರೆ.

English summary
Dharwad: Application invited from women degree holders for Apprentice in Information and Public Relations department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X