ಧಾರವಾಡದಲ್ಲಿ ಕೆಲಸ ಖಾಲಿ ಇದೆ; ಏಪ್ರಿಲ್ 18ರೊಳಗೆ ಅರ್ಜಿ ಹಾಕಿ

ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಬೆಂಗಳೂರು, ಮಾರ್ಚ್ 19; ಧಾರವಾಡ ಜಿಲ್ಲೆಯಲ್ಲಿ ಹುಬ್ಬಳ್ಳಿ-ಧಾರವಾಡ (ಶಹರ) ತಾಲೂಕು ಮತ್ತು ಕಲಘಟಗಿ ತಾಲೂಕಿನ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 18ರೊಳಗೆ ಅರ್ಜಿ ಹಾಕಬಹುದಾಗಿದೆ.

ಕಲಘಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ಭರ್ತಿಗಾಗಿ ಭೌತಿಕವಾಗಿ ಆಫ್‍ಲೈನ್ ಮೂಲಕ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಾರ್ಚ್ 20 ರಿಂದ ಏಪ್ರಿಲ್ 18ರೊಳಗಾಗಿ ಸಲ್ಲಿಸಬೇಕು. ಅರ್ಜಿಯ ಲಕೋಟೆಯ ಮೇಲೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಎಂದು ನಮೂದಿಸಬೇಕು.

Dharwad Distract Anganwadi Recruitment 2023 March

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಕಲಘಟಗಿ ತಾಲೂಕಾ ಯೋಜನಾ ಕಛೇರಿಯಲ್ಲಿ ಇಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಅರ್ಜಿಗಳನ್ನು ಹಾಕಬೇಕು. ಖಾಲಿ ಹುದ್ದೆಗಳ ವಿವರ ಮತ್ತು ನೇಮಕಾತಿಗಳ ಷರತ್ತುಗಳ ಮಾಹಿತಿಯನ್ನು ಶಿಶು ಅಭಿವೃದ್ಧಿ ಯೋಜನೆಯ ನೋಟಿಸ್‌ ಬೋರ್ಡಿಗೆ ಹಾಗೂ ಅಂಗನವಾಡಿ ಕೇಂದ್ರಗಳ ನೋಟಿಸ್ ಬೋರ್ಡಿಗೆ ಮತ್ತು ಕಲಘಟಗಿ ತಹಶೀಲ್ದಾರ್ ಕಛೇರಿ, ಕಲಘಟಗಿ ತಾಲೂಕ ಪಂಚಾಯತ್ ಕಚೇರಿಯ ನಾಮಫಲಕದಲ್ಲಿ ಅಳವಡಿಸಿದ್ದು ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ ಕಚೇರಿ, ಕಲಘಟಗಿ ಕಾರ್ಯಾಲಯವನ್ನು (ಕಛೇರಿ ದೂರವಾಣಿ ಸಂಖ್ಯೆ 08370-284532) ಸಂಪರ್ಕಿಸಬಹುದು ಮತ್ತು ಅರ್ಜಿ ನಮೂನೆಯನ್ನು ಕಛೇರಿಯಿಂದ ಪಡೆಯಬಹುದು ಎಂದು ಕಲಘಟಗಿ ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dharwad Distract Anganwadi Recruitment 2023 March

ಹುಬ್ಬಳ್ಳಿ-ಧಾರವಾಡ (ಶಹರ); ಹುಬ್ಬಳ್ಳಿ-ಧಾರವಾಡ (ಶಹರ) ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಯ ಭರ್ತಿಗಾಗಿ ಆಫ್‍ಲೈನ್ ಮೂಲಕ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ಮಾರ್ಚ್‌ 20 ರಿಂದ ಏಪ್ರಿಲ್ 18ರೊಳಗಾಗಿ ಸಲ್ಲಿಸಬೇಕು. ಅರ್ಜಿಯ ಲಕೋಟೆಯ ಮೇಲೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಎಂದು ನಮೂದಿಸಬೇಕು.

ಅಭ್ಯರ್ಥಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಹುಬ್ಬಳ್ಳಿ-ಧಾರವಾಡ (ಶಹರ) ಯೋಜನಾ ಕಛೇರಿಯಲ್ಲಿ ಇಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಹಾಕಬೇಕು. ಖಾಲಿ ಹುದ್ದೆಗಳ ವಿವರ ಮತ್ತು ನೇಮಕಾತಿಗಳ ಷರತ್ತುಗಳ ಕುರಿತು ಶಿಶು ಅಭಿವೃದ್ಧಿ ಯೋಜನೆಯ ನೋಟಿಸ್‌ ಬೋರ್ಡಿಗೆ ಹಾಗೂ ಅಂಗನವಾಡಿ ಕೇಂದ್ರಗಳ ನೋಟಿಸ್ ಬೋರ್ಡಿಗೆ, ವಲಯ ಅಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ತಹಶೀಲ್ದಾರ ಕಛೇರಿ ಹುಬ್ಬಳ್ಳಿ, ಧಾರವಾಡ, ತಾಲೂಕ ಪಂಚಾಯತ್ ಕಚೇರಿ ಧಾರವಾಡ, ಹುಬ್ಬಳ್ಳಿ ನಾಮಫಲಕದಲ್ಲಿ ಅಳವಡಿಸಿದ್ದು ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ, ಹುಬ್ಬಳ್ಳಿ-ಧಾರವಾಡ (ಶಹರ) ಕಾರ್ಯಾಲಯವನ್ನು ಸಂಪರ್ಕಿಸಬಹದು. ಕಛೇರಿ ದೂರವಾಣಿ ಸಂಖ್ಯೆ 0836-2440733. ಅರ್ಜಿ ನಮೂನೆಯನ್ನು ಕಛೇರಿಯಿಂದ ಪಡೆಯಬಹುದು ಎಂದು ಹುಬ್ಬಳ್ಳಿ-ಧಾರವಾಡ (ಶಹರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+