ಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿ

ಧಾರವಾಡ, ಮೇ 14 : ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು 25/6/2019 ಕೊನೆಯ ದಿನವಾಗಿದೆ.

ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ ಹಾಗೂ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) ನಿಯಮ 1982 ಮತ್ತು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) (ತಿದ್ದುಪಡಿ) ನಿಯಮ 2007ರ ಅನ್ವಯ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯ ಆಯ್ಕೆಯಾದ ಶೀಘ್ರಲಿಪಿಗಾರರು ಕರ್ನಾಟಕ ಸರ್ಕಾರ ನಿಗದಿಪಡಿಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಶೇ 50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು ನಿಗದಿತ ಅವಧಿಯಲ್ಲಿ ಉತ್ತೀರ್ಣರಾಗತಕ್ಕದ್ದು.

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ನೋಡಬಹುದಾಗಿದೆ......

ವಿದ್ಯಾರ್ಹತೆ ವಿವರಗಳು

ವಿದ್ಯಾರ್ಹತೆ ವಿವರಗಳು

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯುವ ನಡೆಸುವ ಸೆಕ್ರಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶ್ರೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಾಸ ಮಾಡಿರಬೇಕು.

ವಯೋಮಿತಿ ವಿವರ

ವಯೋಮಿತಿ ವಿವರ

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ವಿವರ ಕೆಳಗಿನಂತಿದೆ.
* ಪ.ಜಾ/ಪ.ಪಂ 40 ವರ್ಷ
* ಪ್ರವರ್ಗ 1/2ಎ/2ಬಿ/3ಎ/3ಬಿ 38 ವರ್ಷ
* ಸರ್ಕಾರಿ ಸೇವೆಯಲ್ಲಿರುವವರು, ವಿಧವೆಯರು/ಅಂಗವಿಕಲರಿಗೆ/ಮಾಜಿ ಸೈನಿಕರಿಗೆ ವಯೋಮಿತಿಯಲ್ಲಿ ನಿಯಮದಂತೆ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಕೆ ಹೇಗೆ?

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಇ ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸಬೇಕು.

ವೇತನ ಶ್ರೇಣಿ ವಿವರ

ವೇತನ ಶ್ರೇಣಿ ವಿವರ

ಶೀಘ್ರಲಿಪಿಗಾರರ ಹುದ್ದೆಗೆ ನೀಡುವ ಸಂಬಳ ಮತ್ತು ಇತರ ಭತ್ಯೆಗಳ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಆದೇಶವನ್ನು ವಿವರವಾಗಿ ಓದಿಕೊಳ್ಳುವಂತೆ ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+