Dharwad Job: ಜಿಲ್ಲೆಯ ಕೃಷಿ ವಿವಿಯಲ್ಲಿ ಕೆಲಸ ಖಾಲಿ ಇದೆ, ನೇರ ಸಂದರ್ಶನಕ್ಕೆ ಹಾಜರಾಗಿ
ಧಾರವಾಡ, ನವೆಂಬರ್ 18: ಧಾರವಾಡದ ಕೃಷಿ ಮಹಾವಿದ್ಯಾಲಯವು (UAS) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರನ್ನು ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆ ತಿಳಿಸಿದೆ.
ಧಾರವಾಡದ ಕೃಷಿ ಮಹಾವಿದ್ಯಾಲಯವು (UAS) ತನ್ನಲ್ಲಿರುವ ಒಟ್ಟು ಒಂದು ಸೀನಿಯರ್ ರಿಸರ್ಚ್ ಫೆಲೋ(SRF) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕೆ ಅರ್ಜಿ ಸಲ್ಲಿಸುವ ನೀವು ಆಯ್ಕೆ ಆದರೆ, ಸರ್ಕಾರಿ ಉದ್ಯೋಗದಲ್ಲಿ ಮುಂದುವರಿಯಬಹುದಾಗಿದೆ. ಈ ಸದಾವಕಾಶವನ್ನು ತಪ್ಪದೇ ಬಳಸಿಕೊಳ್ಳಲು ನೇಮಕಾತಿ ಪ್ರಕ್ರಿಯೆಯನ್ನು ತಿಳಿದು ಕೂಡಲೇ ಸಂದರ್ಶನದಲ್ಲಿ ಭಾಗವಹಿಸಬೇಕು. ಹಾಗಾದರೆ ವಯಸ್ಸಿನ ಮಿತಿ, ಅರ್ಜಿ ಶುಲ್ಕ ಇತರ ಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ: ಧಾರವಾಡದ ಕೃಷಿ ಮಹಾವಿದ್ಯಾಲಯವು (UAS)
ಹುದ್ದೆ ಹೆಸರು: ಸೀನಿಯರ್ ರಿಸರ್ಚ್ ಫೆಲೋ(SRF)
ಮಾಸಿಕ ವೇತನ: ನಿಯಮಾನುಸಾರ
ಪೋಸ್ಟಿಂಗ್: ಧಾರವಾಡ
ಸಂದರ್ಶನ ದಿನ: ಡಿಸೆಂಬರ್ 3
ಸಮಯ: ಬೆಳಗ್ಗೆ 10 ಗಂಟೆಗೆ
ಶೈಕ್ಷಣಿಕ ಅರ್ಹತೆ
ಈ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಪಾಲ್ಗೊಳ್ಳುವ ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯ ಎಂ.ಸಿ., ಸ್ನಾತಕೋತ್ತರ ಪದವಿ ಪಡೆದಿರುವುದು ಕಡ್ಡಾಯ ಎಂದು ಅಧಿಸೂಚನೆ ತಿಳಿಸಿದೆ.
ಅಭ್ಯರ್ಥಿಗಳ ವಯೋಮಿತಿ
ಅರ್ಜಿ ಸಲ್ಲಿಸಲಿರುವ/ಸಂದರ್ಶನಕ್ಕ ಹಾಜರಾಗುವ ಆಸಕ್ತ ಅಭ್ಯರ್ಥಿಗಳ ವಯಸ್ಸು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ತಿಳಿಸಿರುವಂತೆ ಇರಬೇಕು. ಅದು ಎಷ್ಟು ಎಂಬುದು ನೀಡಿಲ್ಲ. ಜಾತಿ ಮೀಸಲಾತಿ ಅನುಗುಣವಾಗಿ ಸ್ವಲ್ಪ ವಯೋಮಿತಿ ಸಡಲಿಕೆ ಸಿಗಲಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆ ಗಮನಿಸಬೇಕು.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
ಈ ಹುದ್ದೆಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಅವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆ ಆದ ಅಭ್ಯರ್ಥಿಗೆ ಮಾಸಿಕ ರೂಪಾಯಿ 35,000 ವೇತನ ಸಹಿತ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಂದರ್ಶನ ಎಲ್ಲಿ ನಡೆಯುತ್ತದೆ
ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್. ನಿರ್ದೇಶಕರು (HQ), ಕೃಷಿನಗರ, ಧಾರವಾಡ- 580005 ಕರ್ನಾಟಕ, ಇಲ್ಲಿ ಡಿಸೆಂಬರ್ 3ರಂದು ಬೆಳಗ್ಗೆ ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಈ ಅಧಿಕೃತ ಜಾಲತಾಣ https://uasd.edu/ ಕ್ಕೆ ಭೇಟಿ ನೀಡಬೇಕು.












Click it and Unblock the Notifications