220 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಡಿಐಪಿಪಿ
ಬೆಂಗಳೂರು, ಆಗಸ್ಟ್ 23 : ಡಿಐಪಿಪಿ 220 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 4, 2018.
ಕೈಗಾರಿಕಾ ನೀತಿ ಮತ್ತು ಉತ್ತೇಜನ ಮಂಡಳಿಯು (ಡಿಐಪಿಪಿ) Examiner (Patents & Design) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.
ಬಯೋಕೆಮಿಸ್ಟ್ರಿ, ಕೆಮಿಸ್ಟ್ರಿ, ಕಂಪ್ಯೂಟರ್ ಸೈನ್ಸ್, ಇನ್‌ಫರ್‌ಮೇಶನ್ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಯೋಮೆಡಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಇನ್‌ಫರ್‌ಮೇಶನ್ ಸೈನ್ಸ್, ಇನ್‌ಫರ್‌ಮೇಶನ್ ಟೆಕ್ನಾಲಜಿಯಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 200, ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ವೇತನ ಶ್ರೇಣಿ : 56100 ರಿಂದ 177500 ಪ್ರತಿ ತಿಂಗಳು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications