ವಿವಿಧ ಇಲಾಖೆ ಖಾಲಿ ಹುದ್ದೆ ಬಗ್ಗೆ ಮಾಹಿತಿ ಕೇಳಿದ ಡಿಐಪಿಆರ್

ಬೆಂಗಳೂರು, ಡಿಸೆಂಬರ್ 04: ಕರ್ನಾಟಕದಲ್ಲಿ ಖಾಲಿ ಇರುವ ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆಗೆಳಿಗೆ ಸೂಚನೆ ನೀಡಲಾಗಿದೆ. 2011ರ ನೇಮಕಾತಿ ಪ್ರಕ್ರಿಯೆ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಸಿಬ್ಭಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ಇಲಾಖೆಗಳಿಗೆ ಈ ಕುರಿತು ಸೂಚನೆ ಕೊಟ್ಟಿದೆ. ಗ್ರೂಪ್ 'ಎ' ಮತ್ತು 'ಬಿ' ವೃಂದದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರತಿವರ್ಷ ನಡೆಯುತ್ತದೆ.

ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ನಿಯಮದ ಮೂಲಕ ಪ್ರತಿ ವರ್ಷ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆದ್ದರಿಂದ, ಮಾಹಿತಿ ಸಂಗ್ರಹ ಮಾಡಲಾಗುತ್ತದೆ.

 DIPR Seeks Report On Group A And B Vacant Post In All Departments

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತದೆ. ಆದ್ದರಿಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಹಿತಿ ಸಂಗ್ರಹ ಮಾಡಿ ಕೆಪಿಎಸ್‌ಸಿಗೆ ಸಲ್ಲಿಕೆ ಮಾಡುತ್ತದೆ.

2011ನೇ ಸಾಲಿನ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ನೇಮಕಾತಿ ಬಗ್ಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಖಾಲಿ ಇರುವ ಹುದ್ದೆಗಳ ವಿವರ ನೀಡುವಾಗ 2011ನೇ ಸಾಲಿನ ಹುದ್ದೆಗಳನ್ನು ಪರಿಗಣಿಸಬಾರದು ಎಂದು ಸೂಚನೆ ನೀಡಲಾಗಿದೆ.

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ನೇಮಕಾತಿಯನ್ನು ಈ ವರ್ಷ ಸ್ಥಗಿತಗೊಳಿಸಲಾಗಿದೆ. 2021ರಲ್ಲಿ ಹೊಸದಾಗಿ ನೇಮಕಾತಿ ಆದೇಶ ಹೊರಡಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+