• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿವಿಧ ಇಲಾಖೆ ಖಾಲಿ ಹುದ್ದೆ ಬಗ್ಗೆ ಮಾಹಿತಿ ಕೇಳಿದ ಡಿಐಪಿಆರ್

|

ಬೆಂಗಳೂರು, ಡಿಸೆಂಬರ್ 04: ಕರ್ನಾಟಕದಲ್ಲಿ ಖಾಲಿ ಇರುವ ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆಗೆಳಿಗೆ ಸೂಚನೆ ನೀಡಲಾಗಿದೆ. 2011ರ ನೇಮಕಾತಿ ಪ್ರಕ್ರಿಯೆ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಸಿಬ್ಭಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ಇಲಾಖೆಗಳಿಗೆ ಈ ಕುರಿತು ಸೂಚನೆ ಕೊಟ್ಟಿದೆ. ಗ್ರೂಪ್ 'ಎ' ಮತ್ತು 'ಬಿ' ವೃಂದದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರತಿವರ್ಷ ನಡೆಯುತ್ತದೆ.

ಸ್ವಯಂ ಉದ್ಯೋಗ ತರಬೇತಿಗಾಗಿ ಡಿ.9ಕ್ಕೆ ನೇರ ಸಂದರ್ಶನ ಸ್ವಯಂ ಉದ್ಯೋಗ ತರಬೇತಿಗಾಗಿ ಡಿ.9ಕ್ಕೆ ನೇರ ಸಂದರ್ಶನ

ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ನಿಯಮದ ಮೂಲಕ ಪ್ರತಿ ವರ್ಷ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆದ್ದರಿಂದ, ಮಾಹಿತಿ ಸಂಗ್ರಹ ಮಾಡಲಾಗುತ್ತದೆ.

ನೇಮಕಾತಿ ಸ್ಥಗಿತ; ಹಲವರ ಕೈ ತಪ್ಪಲಿದೆ ಸರ್ಕಾರಿ ಉದ್ಯೋಗ! ನೇಮಕಾತಿ ಸ್ಥಗಿತ; ಹಲವರ ಕೈ ತಪ್ಪಲಿದೆ ಸರ್ಕಾರಿ ಉದ್ಯೋಗ!

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತದೆ. ಆದ್ದರಿಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಹಿತಿ ಸಂಗ್ರಹ ಮಾಡಿ ಕೆಪಿಎಸ್‌ಸಿಗೆ ಸಲ್ಲಿಕೆ ಮಾಡುತ್ತದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ; ಬೆಂಗಳೂರಲ್ಲಿ ಕೆಲಸ

2011ನೇ ಸಾಲಿನ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ನೇಮಕಾತಿ ಬಗ್ಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಖಾಲಿ ಇರುವ ಹುದ್ದೆಗಳ ವಿವರ ನೀಡುವಾಗ 2011ನೇ ಸಾಲಿನ ಹುದ್ದೆಗಳನ್ನು ಪರಿಗಣಿಸಬಾರದು ಎಂದು ಸೂಚನೆ ನೀಡಲಾಗಿದೆ.

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ನೇಮಕಾತಿಯನ್ನು ಈ ವರ್ಷ ಸ್ಥಗಿತಗೊಳಿಸಲಾಗಿದೆ. 2021ರಲ್ಲಿ ಹೊಸದಾಗಿ ನೇಮಕಾತಿ ಆದೇಶ ಹೊರಡಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

English summary
Department of Information and Public Relations Karnataka seeks information from all departments about group A and B post vacant in this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X