ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಿನಲ್ಲಿ ಫೆ.22 ರಂದು ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ನೇರ ಸಂದರ್ಶನ

|
Google Oneindia Kannada News

ಮೈಸೂರು, ಫೆಬ್ರವರಿ 20: ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ವತಿಯಿಂದ ಮೈಸೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ಅನುಮೋದನೆಯಾಗಿರುವ ವಿವಿಧ ಹುದ್ದೆಗಳಿಗೆ ನೇಮಕ ನಡೆಯಲಿದೆ.

ವಿವಿಧ ಹುದ್ದೆಗಳ ಸೇವೆಯನ್ನು ಗುತ್ತಿಗೆ ಆಧಾರದ ಮೇಲೆ 2020-21ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಮಾರ್ಗಸೂಚಿಯನ್ವಯ ಫೆಬ್ರವರಿ 22 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನೇರ ಸಂದರ್ಶನದ ಮೂಲಕ ನಿಯಮಾನುಸಾರ ನೇಮಕ ಮಾಡಿಕೊಳ್ಳಲಾಗುವುದು.

ಯುವಕರು ನಮ್ಮ ದೇಶದ ದೊಡ್ಡ ಸಂಪತ್ತು: ಸಚಿವ ಶಿವರಾಮ್ ಹೆಬ್ಬಾರ್ಯುವಕರು ನಮ್ಮ ದೇಶದ ದೊಡ್ಡ ಸಂಪತ್ತು: ಸಚಿವ ಶಿವರಾಮ್ ಹೆಬ್ಬಾರ್

ಸ್ತ್ರಿ ರೋಗ ಮತ್ತು ಪ್ರಸೂತಿ ತಜ್ಞ ವೈದ್ಯಾಧಿಕಾರಿಗಳು(2), ಅರವಳಿಕೆ ತಜ್ಞ ವೈದ್ಯಾಧಿಕಾರಿಗಳು(2), ಪೂರ್ಣಕಾಲಿಕ ವೈದ್ಯರು(3), ಮಹಿಳಾ ಶುಶ್ರೂಷಕಿಯರು(25), ಆಡಿಯೋಲಾಜಿಸ್ಟ್(1), ಕಿರಿಯ ಮಹಿಳಾ ಆರೋಗ್ಯ ಸಹಾಯಕಿ(1) ಹುದ್ದೆಗಳಿಗೆ ವಿದ್ಯಾರ್ಹತೆ, ವಯೋಮಿತಿ, ಅನುಭವದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

Jobs: Direct Interview For Various Temporary Posts In Mysuru On Feb 22nd

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಪ್ರಮಾಣ ಪತ್ರ, ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ದೈಹಿಕ ಸದೃಢತೆ, ಅನುಭವ ಪ್ರಮಾಣ ಪತ್ರ ಹಾಗೂ ಇನ್ನಿತರ ಪ್ರಮಾಣ ಪತ್ರದ ದೃಢೀಕರಿಸಿದ ದಾಖಲಾತಿಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2971988 ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
In Mysuru district will be appointed to various posts approved under the National Health Programs on Feb 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X