ಶಿವಮೊಗ್ಗದಲ್ಲಿ ಜನವರಿ 19 ರಂದು ಉದ್ಯೋಗ ಮೇಳ

ಶಿವಮೊಗ್ಗ, ಜನವರಿ 11 : ಶಿವಮೊಗ್ಗ ಜಿಲ್ಲೆಯ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಾಕ್ ಇನ್ ಸಂದರ್ಶನ ಆಯೋಜಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು.

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜನವರಿ 19 ರಂದು ಬೆಳಿಗ್ಗೆ 10ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ.

ಈ ಉದ್ಯೋಗ ಮೇಳದಲ್ಲಿ 8ನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18ರಿಂದ 35ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿ ಹಾಗೂ ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

Direct Interview Walk in for Various Jobs in Shivamogga

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ.8861890866, 9036067511/ 9535312531 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+