ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ:ಬಿಸಿಪಿ

|
Google Oneindia Kannada News

ಬೆಂಗಳೂರು,ಮೇ 18: "ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ" ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಕೃಷಿ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದೆ ಎಂರು.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು (ವೃಂದ ಮತ್ತು ನೇಮಕಾತಿ) ನಿಯಮಗಳು, 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.

 Direct Recruitment For 300 Assistant Agriculture Officers Says Minister BC Patil

ವಿದ್ಯಾರ್ಹತೆ; ಕೃಷಿ ಪದವೀಧರರು ಶೇ 85, ಉಳಿದ ಶೇ 15ರಷ್ಟು ಪೋಸ್ಟ್‌ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿಟೆಕ್ (ಆಹಾರ ತಂತ್ರಜ್ಞಾನ/ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.

English summary
Karnataka agriculture minister B. C. Patil said that finance department has approved to fill 300 vacancies of assistant agricultural officers vacant in the department of agriculture by direct recruitment. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X