ಚಿತ್ರದುರ್ಗ: ಆಗಸ್ಟ್ 23ರಂದು ನೇರ ನೇಮಕಾತಿ ಸಂದರ್ಶನ-ಮಾಹಿತಿ, ವಿವರ ತಿಳಿಯಿರಿ
ಚಿತ್ರದುರ್ಗ, ಆಗಸ್ಟ್, 19: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 23, 2024ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3ರ ವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಅಭ್ಯರ್ಥಿಗಳು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಈ ಉದ್ಯೋಗ ಮೇಳದಲ್ಲಿ 03ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆಮಾಡಿಕೊಳ್ಳಲಿವೆ.
ಎಸ್‌ಎಸ್‌ಎಸ್‌ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಹಾಗು ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060ಕ್ಕೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಹಾಗಾದರೆ ಅರ್ಜಿ ಆಹ್ವಾನಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಖಾಲಿ ಸ್ಥಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆರಿಗೆ ದ್ವಿತೀಯ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ 19ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 30ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಖಾಲಿ ಹುದ್ದೆಗಳ ವಿವರ: ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 08 ಮುಖ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 29 ಖಾಲಿ ಹುದ್ದೆಗಳಿವೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 3 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 12 ಅಂಗನವಾಡಿ ಸಹಾಯಕಿ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ.
ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 16 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 30 ಅಂಗನವಾಡಿ ಸಹಾಯಕಿ ಸೇರಿದಂತೆ 46 ಹುದ್ದೆಗಳು ಖಾಲಿ ಇವೆ. ಹಿರಿಯೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 4 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ 40 ಹುದ್ದೆಗಳು ಖಾಲಿ ಇದೆ.
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 09 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 24 ಹುದ್ದೆಗಳು ಖಾಲಿ ಇವೆ.
ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 18 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಸೇರಿದಂತೆ 42 ಹುದ್ದೆಗಳು ಖಾಲಿಯಿವೆ.
ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 05 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 19 ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.












Click it and Unblock the Notifications