Job News: ಚಿತ್ರದುರ್ಗದಲ್ಲಿ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ-ಮಾಹಿತಿ, ವಿವರ

ಚಿತ್ರದುರ್ಗ, ಜೂನ್‌, 26: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಹಾಗಾದರೆ ಈ ಸಂದರ್ಶನಕ್ಕೆ ಯಾರೆಲ್ಲ ಪಾಲ್ಗೊಳ್ಳಬಹುದಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 29ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ರ ವರೆಗೆ ನೇರ ಸಂದರ್ಶನ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದಾಗಿದೆ.

Direct Recruitment Interview on 29th June at Chitradurga

ಆಸಕ್ತ ಉದ್ಯೋಗ ಆಕಾಂಕ್ಷಿಗಳು ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಇತ್ತೀಚಿನ ಪೋಟೋಗಳನ್ನು ತರಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಹಾಗೂ 9945587060 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+