ಚಿತ್ರದುರ್ಗದಲ್ಲಿ ಸೆಪ್ಟೆಂಬರ್ 11ರಂದು ನೇರ ನೇಮಕಾತಿ ಸಂದರ್ಶನ- ಮಾಹಿತಿ, ವಿವರ ಇಲ್ಲಿದೆ
ಚಿತ್ರದುರ್ಗ, ಸೆಪ್ಟೆಂಬರ್, 09: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆಪ್ಟೆಂಬರ್ 11ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3ರ ವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಹಾಗಾದರೆ ಅಭ್ಯರ್ಥಿಗಳನ್ನು ಯಾವೆಲ್ಲಾ ದಾಖಲೆಗಳನ್ನು ತರನೇಕು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದೆ.

ಇನ್ನು ಆಸಕ್ತ ಅಭ್ಯರ್ಥಿಗಳು 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಅಗತ್ಯ ದಾಖಲೆಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 7019759147ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹಾಗಾದರೆ ಅರ್ಜಿಸಲ್ಲಿಹಬಯಸುವವರು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎಂದು ಇಲ್ಲಿ ತಿಳಿಯಿರಿ.
ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆ ಆಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿ ಆಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.
ಏನೆಲ್ಲ ಅರ್ಹತೆಗಳಿರಬೇಕು?: ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಬೇಕಾಗುತ್ತದೆ. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸಬೇಕು.
ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ದಾಖಲೆ ಲಗತ್ತಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications