ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2 ಸಾವಿರ ವೈದ್ಯರು, 700ಕ್ಕೂ ಹೆಚ್ಚು ನರ್ಸಿಂಗ್ ಸಿಬ್ಬಂದಿಗಳ ನೇರ ನೇಮಕಾತಿ: ಸಚಿವ ಸುಧಾಕರ್

|
Google Oneindia Kannada News

ವಿಜಯನಗರ, ಮಾರ್ಚ್ 31: ಮುಂದಿನ ಒಂದು ತಿಂಗಳೊಳಗೆ 2 ಸಾವಿರಕ್ಕೂ ಹೆಚ್ಚು ವೈದ್ಯರನ್ನು, 700ಕ್ಕೂ ಹೆಚ್ಚು ಪ್ಯಾರಾಮೆಡಿಕಲ್, ನರ್ಸಿಂಗ್ ಸಿಬ್ಬಂದಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ವರ್ಚುವಲ್ ತಂತ್ರಜ್ಞಾನದ ಮೂಲಕ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕರ ಬಳಕೆಗೆ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂಆರ್‍ಐ), ಗ್ರಂಥಾಲಯ, ಉಪನ್ಯಾಸಕರ ಸಭಾಂಗಣ ಮತ್ತು ಪರೀಕ್ಷಾ ಸಭಾಂಗಣ, 300 ವಿದ್ಯಾರ್ಥಿಗಳ ಆಸನ ಸಾಮರ್ಥ್ಯದ ಉಪನ್ಯಾಸ ರಂಗಮಂದಿರ, ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ದಂತ ವೈದ್ಯಕೀಯ ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್‍ಗಳ ಶಂಕುಸ್ಥಾಪನೆ ಮಾತನಾಡಿದರು.

ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ವೈದ್ಯರಿಗೆ ಉತ್ತೇಜನ ನೀಡಲು ಬಡ್ತಿ ಮತ್ತು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದ್ದು, ನಿರ್ದಿಷ್ಟ ಕಾನೂನುಗಳನ್ನು ಬದಲಾವಣೆ ಮಾಡುತ್ತಿದ್ದೇವೆ ಎಂದು ಸಚಿವ ಡಾ.ಸುಧಾಕರ್ ವಿವರಿಸಿದರು.

Direct Recruitment Of 2 Thousand Doctors And Over 700 Nursing Staffs: Minister K.Sudhakar

ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿಎಸ್‍ಆರ್ ಸಮಿತಿ ರಚಿಸಲಾಗಿದ್ದು, ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಈ ಹಿಂದೆ ಕಾರಾಗೃಹ ಕಟ್ಟಡವಾಗಿದ್ದ 173 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ವಿಮ್ಸ್ ತಲೆ ಎತ್ತಿದೆ. ಗತವೈಭವವನ್ನು ಆರೋಗ್ಯ ಕ್ಷೇತ್ರದಲ್ಲಿ ಮರುಕಳಿಸುವ ನಿಟ್ಟಿನಲ್ಲಿ ವಿಮ್ಸ್ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಮ್ಸ್ ಕೇವಲ ನಮ್ಮ ರಾಜ್ಯದ ಜನರಿಗೆ ಚಿಕಿತ್ಸೆ ನೀಡುವುದಕ್ಕೆ ಸೀಮಿತವಾಗಿಲ್ಲ, ಆಂಧ್ರಪ್ರದೇಶ ಮತ್ತು ತೆಲಂಗಾಣ ಜನರಿಗೆ ಚಿಕಿತ್ಸೆ ಪಡೆದುಕೊಳ್ಳುವ ಸಂಜೀವಿನಿಯಾಗಿದೆ ಎಂದು ಮಾಹಿತಿ ನೀಡಿದರು.

Direct Recruitment Of 2 Thousand Doctors And Over 700 Nursing Staffs: Minister K.Sudhakar

ವಿಮ್ಸ್ ಸಂಸ್ಥೆಯನ್ನು ಏಮ್ಸ್ ಮಾದರಿಯನ್ನಾಗಿ ಪರಿವರ್ತಿಸಲು ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಾತಿಯನ್ನು 150ರಿಂದ 250ಕ್ಕೆ ಹೆಚ್ಚಿಸಿ ಉನ್ನತೀಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಗೆ ಸರಕಾರ ಸ್ಪಂದಿಸಿ ವಿಮ್ಸ್ ಸಂಸ್ಥೆಗೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಕಟ್ಟಡ ಕಾಮಗಾರಿಗಳು ಮತ್ತು ಉಪಕರಣಗಳನ್ನು ಅಳವಡಿಸಿಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

English summary
Health Minister Dr K.Sudhakar said more than 2,000 doctors, more than 700 paramedical and nursing staff are scheduled to be recruited within the next one month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X