ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಕಾಲೇಜುಗಳಲ್ಲಿ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 2: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು 1242 ಹುದ್ದೆಗಳು ಖಾಲಿಯಿದ್ದು, ಪಾರದರ್ಶಕವಾಗಿ ಮೆರಿಟ್ ಆಧಾರಿತ ಪರೀಕ್ಷೆ ಪ್ರಕ್ರಿಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯಲಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆ ಆಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ಲಭಿಸಿದೆ. ಅತೀ ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಬಿಡುಗಡೆ ಆಗಲಿದೆ.

Direct Recruitment To 1242 Assistant Professor Posts In Government Colleges

2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೆ ಭರ್ತಿಯಾಗದಿರುವ 145 ಹುದ್ದೆಗಳನ್ನು ಒಳಗೊಂಡಂತೆ ಪ್ರಸ್ತುತ ಈ ಕೆಳಗಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಹತೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಖಾಲಿ ಹುದ್ದೆಯ ವಿಷಯಕ್ಕೆ ಸಂಬಂಧಿಸಿದ ಸ್ನಾತಕೋತ್ತರ ಪದವಿ ಜತೆಗೆ ಎನ್‌ಇಟಿ, ಕೆಎಸ್‌ಇಟಿ, ಪಿಎಚ್‌ಡಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-10-2021
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-11-2021ರ ರಾತ್ರಿ 11-59 ರವರೆಗೆ.
ಇ- ಪೋಸ್ಟ್‌ ಆಫೀಸ್‌ನಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 10-11-2021

ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ: 2021ರ ಡಿಸೆಂಬರ್ ತಿಂಗಳ 3ನೇ ಅಥವಾ 4ನೇ ವಾರದಲ್ಲಿ ನಡೆಸುವ ಸಾಧ್ಯತೆ ಇದೆ.

ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್‌ ಟೆಕ್ನಾಲಜಿ ವಿಷಯಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆಸಲಾಗುತ್ತದೆ.

ಈ ಹುದ್ದೆಗಳಲ್ಲಿ ಶೇ.95ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮತ್ತು ಶೇ.5ರಷ್ಟು ಇಲಾಖೆಯ ಗ್ರೂಪ್‌ ಸಿ ವೃಂದದಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ 57,700- 1,82,400 ರೂ. ವರೆಗೆ ಇರುತ್ತದೆ.

ನೇಮಕಾತಿ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ (ನೇರ ಮತ್ತು ಸಮತಳ) ಮತ್ತು ರೋಸ್ಟರ್ ಬಿಂದುಗಳನ್ವಯ ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ವಿಷಯವಾರು ಖಾಲಿ ಹುದ್ದೆಗಳ ವಿವರವನ್ನು ಅತೀ ಶೀಘ್ರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿರುವ ನೋಟಿಫಿಕೇಶನ್‌ನಲ್ಲಿ ನೀಡಲಿದ್ದು, ಓದಿ ತಿಳಿಯಬಹುದು.

Recommended Video

#RememberingGandhiji: ಇಂದು 152 ನೇ ಗಾಂಧಿ ಜಯಂತಿ | Oneindia Kannada

English summary
Notification has been issued for the direct recruitment of the posts of Assistant Professor vacancies in Government First Class Colleges in Karnataka State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X