ಫೆ. 24ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಶಿವಮೊಗ್ಗ, ಫೆಬ್ರವರಿ 18: 'ಸರ್ವರಿಗೂ ಉದ್ಯೋಗ' ಎಂಬ ಶೀರ್ಷಿಕೆಯಡಿ ಫೆಬ್ರವರಿ 24ರಂದು ಶಿವಮೊಗ್ಗ ನಗರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಈ ಉದ್ಯೋಗಮೇಳ ಉದ್ಘಾಟಿಸಲಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

ಉದ್ಯೋಗ ಮೇಳದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ. ಎಸ್. ಚಂದ್ರಭೂಪಾಲ ಮಾಹಿತಿ ನೀಡಿದ್ದಾರೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

District Level Job Fair At ATNCC College Shivamogga On February 24

ಫೆಬ್ರವರಿ 24ರ ಸೋಮವಾರ ಬೆಳಗ್ಗೆ 9.30ಕ್ಕೆ ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಉದ್ಯೋಗ ಮೇಳ ಆರಂಭವಾಗಲಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಕುರಿತು ಸಿ. ಎಸ್. ಚಂದ್ರಭೂಪಾಲ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆಯನ್ನು ನಡೆಸಿದರು.

ಉದ್ಯೋಗ ಮೇಳದ ಮಾಹಿತಿ: ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿಯಾಗಲಿದ್ದು, ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ನೀಡಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಯುವನಿಧಿ ನೋಂದಣಿ ಅಭಿಯಾನವನ್ನು ಸಹ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಮಳಿಗೆ ಸ್ಥಾಪಿಸಿ, ಇದುವರೆಗೆ ನೋಂದಣಿಯಾಗದ ಅರ್ಹ ಅಭ್ಯರ್ಥಿಗಳನ್ನು ಯುವನಿಧಿಗೆ ನೋಂದಣಿ ಮಾಡಲಾಗುತ್ತದೆ.

ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಎನ್. ಮಾತನಾಡಿ, "ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಬೇಕು. ಯಾವ ಕೊಠಡಿಯಲ್ಲಿ ಯಾವ ವಿದ್ಯಾರ್ಹತೆ ಪಡೆದವರಿಗೆ ಸಂದರ್ಶನವೆಂದು ಫಲಕ ಹಾಕಿರಬೇಕು. ಕುಡಿಯುವ ನೀರು ಇತರೆ ಮೂಲಭೂತ ಸೌಕರ್ಯ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ ಜಿಲ್ಲೆಯಾದ್ಯಂತ ಉದ್ಯೋಗ ಮೇಳದ ಕುರಿತು ಉತ್ತಮ ಪ್ರಚಾರ ಕೈಗೊಳ್ಳಬೇಕು. ನಗರದ ಮುಖ್ಯ ಭಾಗಗಳಲ್ಲಿ ಹಾಗೂ ತಾಲೂಕಿನ ಮುಖ್ಯ ಪ್ರದೇಶದಲ್ಲಿ ಫ್ಲೆಕ್ಸ್, ಕಸ ತೆಗೆದುಕೊಂಡ ವಾಹನದ ಮೂಲಕ ಪ್ರಚಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜು, ವಸತಿ ಶಾಲಾ-ಕಾಲೇಜುಗಳಲ್ಲಿ ಮೇಳದ ಕುರಿತು ಮಾಹಿತಿ ನೀಡಲಾಗುತ್ತದೆ.

ಉದ್ಯೋಗ ಮೇಳಕ್ಕೆ ಈಗಾಗಲೇ 65 ಕಂಪನಿಗಳ ಜೊತೆ ಮಾತಕತೆ ನಡೆಸಲಾಗಿದೆ. 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಯುವನಿಧಿ ಫಲಾನುಭವಿಗಳು, ತಾಂತ್ರಿಕ ತರಬೇತಿ ಪಡೆದವರು, 18 ರಿಂದ 35 ವಯೋಮಿತಿಯೊಳಗಿನ ನಿರುದ್ಯೋಗ ಯುವಕ-ಯುವತಿಯರು ಮತ್ತು ಉದ್ಯೋಗಕ್ಕೆ ತಕ್ಕ ವಿದ್ಯಾರ್ಹತೆ ಹೊಂದಿರು ಆಸಕ್ತರು ಆನ್‌ಲೈನ್ https://forms.gle/se41pagcoriexpppg ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಈಗಾಗಲೇ ಲಿಂಕ್‌ ಅನ್ನು ನೀಡಲಾಗಿದ್ದು, ಉದ್ಯೋಗ ಮೇಳದ ಸ್ಥಳದಲ್ಲಿಯೂ ಸಹ ನೋಂದಣಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮವನ್ನು ದೂರವಾಣಿ ಸಂಖ್ಯೆ 08182-255294, 9019485688 ಅನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+